ಮಡಿಕೇರಿ, ಜ. ೫: ನೆರೆಯ ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲಾ ವ್ಯಾಪ್ತಿಯ ಬಾತುಕೋಳಿಗಳಲ್ಲಿ ಕೋಳಿ ಶೀತಜ್ವರ ಕಂಡುಬAದಿದ್ದು, ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೋಳಿ ಶೀತ ಜ್ವರ (ಹಕ್ಕಿಜ್ವರ) ನಿಯಂತ್ರಣ ಸಂಬAಧ ಸರ್ಕಾರದ ಮಾರ್ಗಸೂಚಿ ಯಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಿ, ಕೇರಳ ರಾಜ್ಯದಿಂದ ಕೊಡಗು ಜಿಲ್ಲೆಗೆ ಆಗಮಿಸುವ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯ ವಾಹನಗಳನ್ನು ಪರಿಶೀಲಿಸುವುದರ ಜೊತೆಗೆ, ಸಾಗಾಣಿಕೆ ವಾಹನಗಳನ್ನು ಸ್ಯಾನಿಟೈಸ್ ಮಾಡಿ ಜಿಲ್ಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಚೆಕ್‌ಪೋಸ್ಟ್ಗಳ ಸ್ಥಾಪನೆ ಮತ್ತು ಅಗತ್ಯ ಸಹಕಾರಕ್ಕೆ ಅರಣ್ಯ, ಪೊಲೀಸ್, ಸಾರಿಗೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಲಿದ್ದು, ಈ ಸಂಬAಧ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಹಕ್ಕಿಜ್ವರ ನಿಯಂತ್ರಣ ಸಂಬAಧ ಜಿಲ್ಲಾಡಳಿತ ಸರ್ಕಾರದ ಮಾರ್ಗಸೂಚಿ ಯಂತೆ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಸುರೇಶ್ ಭಟ್ ಮಾತನಾಡಿ, ಪಶುಪಾಲನಾ ಇಲಾಖೆಯಿಂದ ಹಕ್ಕಿಜ್ವರ ನಿಯಂತ್ರಣ ಮತ್ತು ನಿರ್ವಹಣೆ ಮಾರ್ಗಸೂಚಿ ಯನ್ವಯ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರ‍್ಯಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಕೇರಳ ರಾಜ್ಯದ ಗಡಿಭಾಗದಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಅರಣ್ಯ, ಪೊಲೀಸ್, ಸಾರಿಗೆ, ಆರೋಗ್ಯ, ಪಂಚಾಯತ್ ರಾಜ್ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದರು.

ಅಸ್ವಾಭಾವಿಕವಾಗಿ ಕೋಳಿ ಅಥವಾ ವನ್ಯ ಪಕ್ಷಿಗಳ ಮರಣ ಕಂಡುಬAದಲ್ಲಿ ಈ ಬಗ್ಗೆ ಗಮನಹರಿಸಿ ವರದಿ ಸಲ್ಲಿಸಲಾಗುವುದು ಎಂದರು.

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಚಿದಾನಂದ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರು ಚೆಕ್‌ಪೋಸ್ಟ್ಗಳಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷಾö್ಮಣು ಜೀವಿಶಾಸ್ತç ವಿಭಾಗದ ಮುಖ್ಯಸ್ಥ ಡಾ. ನಜೀಮ ತಬಸೀರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಪ್ರಸನ್ನ, ಡಾ. ಹರೀಶ್, ಡಾ. ಬಾದಾಮಿ ಇತರರು ಇದ್ದರು.