ಕೂಡಿಗೆ, ಜ. ೭: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ಬೆಳವಣಿಗೆಗೆ ತಳಮಟ್ಟದಿಂದ ಒಗ್ಗೂಡಿ ದುಡಿದರೆ ಪಕ್ಷ ಜಿಲ್ಲೆಯಲ್ಲಿ ಪ್ರಬಲವಾಗಿ ಬೆಳೆಯಲು ಸಾಧ್ಯವಾಗಲಿದೆ. ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಅಭಿವೃದ್ಧಿಯ ಸರ್ವತೋಮುಖ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಡಿಗೆಯ ರಾಮಲಿಂಗೇಶ್ವರ ಸಹಕಾರ ಸಂಘದ ಸಭಾಂಗಣದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ಬಿ.ಎ. ಜೀವಿಜಯನವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ಕರ್ತವ್ಯ ನಿಷ್ಠೆಯಿಂದ ಪಕ್ಷದ ಮುಖೇನ ಗೆಲುವು ಸಾಧಿಸಿ ಗ್ರಾಮದ ಅಭಿವೃದ್ಧಿಗೆ ಆತ್ಮಸ್ಥೆöÊರ್ಯವನ್ನು ತುಂಬಿಕೊAಡು ಮುಂದಿನ ದಿನಗಳಲ್ಲಿ ಸಂಘಟನಾತ್ಮಕವಾಗಿ ದುಡಿಯುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಐಎನ್ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಮಾತಾನಾಡಿದರು. ವೇದಿಕೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹಸೈನಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ರಾಜಮ್ಮ ರುದ್ರಯ್ಯ, ಕುಶಾಲನಗರ ಬ್ಲಾಕ್ ಸಂಯೋಜಕ ಪ್ರದೀಪ್ ರೈ, ವಿಶೇಷಚೇತನ ಸಂಘದ ರಾಜ್ಯಾಧ್ಯಕ್ಷ ಡಿ.ಕೆ. ಸುರೇಶ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಕೆ.ಎಂ. ಲೋಕೇಶ್, ಅಜ್ಜಳ್ಳಿ ರವಿ, ಗೋವಿಂದರಾಜ್ ದಾಸ್, ಜನಾರ್ದನ, ಹೂವಯ್ಯ ಹಾಜರಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತ ಸದಸ್ಯರುಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅಭಿನಂದನಾ ಸಮಾರಂಭದ ವೇದಿಕೆಯಲ್ಲಿ ರಾಜ್ಯ ಕಾರ್ಮಿಕ ಸಂಘದ ಕಾರ್ಯದರ್ಶಿ ಅಜ್ಜಳ್ಳಿ ರವಿ ಕುಳಿತುಕೊಂಡಿರುವುದನ್ನು ಪ್ರಶ್ನೆ ಮಾಡಿ ಮಾತಿನ ಚಕಮಕಿ ನಡೆಸಿ ಕಾರ್ಯಕರ್ತರು ಸಭಾಂಗಣದಿAದ ಹೊರ ನಡೆದ ಪ್ರಸಂಗ ನಡೆಯಿತು.
ಸಭೆಯು ಪ್ರಾರಂಭ ಆಗುತ್ತಿದ್ದ ಸಂದರ್ಭದಲ್ಲಿ ಸಭೆಯ ಮುಂಭಾಗಕ್ಕೆ ಬಂದ ನೂರಾರು ಕಾರ್ಯಕರ್ತರು ‘ವೇದಿಕೆಯಲ್ಲಿ ಕುಳಿತುಕೊಂಡಿರುವ ವ್ಯಕ್ತಿಯನ್ನು ವೇದಿಕೆಯಿಂದ ಇಳಿಸಿ. ಇಲ್ಲದ್ದಿದರೆ ನಾವುಗಳೆ ಈ ಸಭೆಯಲ್ಲಿ ಭಾಗವಹಿಸುವುದಿಲ್ಲ’ ಎಂದು ನಡೆಯಲು ಮುಂದಾದರು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಸಮಾಧಾನ ಪಡಿಸಲು ಪ್ರಯತ್ನಿಸಿದರು. ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್, ವಾಣಿ, ಗುಡ್ಡೆಹೊಸೂರು ಭೀಮಯ್ಯ, ಸ್ಥಳೀಯ ಪ್ರಮುಖರಾದ ಅಣ್ಣಯ್ಯ, ಚಂದ್ರು, ಭದ್ರಾ ಸೇರಿದಂತೆ ಅನೇಕ ಕಾರ್ಯಕರ್ತರು ಹೊರ ಹೋಗುವ ಸಂದರ್ಭದಲ್ಲಿ ವೇದಿಕೆಯಿಂದ ಮಾಜಿ ಸಚಿವ ಬಿ.ಎ. ಜೀವಿಜಯನವರು ಇಳಿದು ಬಂದು ಕಾರ್ಯಕರ್ತರನ್ನು ಸಮಾಧಾನಗೊಳಿಸಿದ ನಂತರ ಅಭಿನಂದನಾ ಕಾರ್ಯಕ್ರಮ ಪ್ರಾರಂಭವಾಯಿತು. ವೇದಿಕೆಯಲ್ಲಿ ಕುಳಿತಿದ್ದ ವ್ಯಕ್ತಿ ಸಭೆಯ ಮುಂಭಾಗದಲ್ಲಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಟ್ಟರು.