ಸೋಮವಾರಪೇಟೆ, ಜ. ೭: ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಮೀಪದ ಶಾಂತಳ್ಳಿ ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ಜಾತ್ರೋತ್ಸವ ತಾ. ೧೩ ರಿಂದ ೧೭ ರವರೆಗೆ ನಡೆಯಲಿದ್ದು, ದೇವಾಲಯದ ಧರ್ಮದರ್ಶಿ ಮಂಡಳಿ ೬೨ನೇ ಮಹಾ ರಥೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ತಾ. ೧೩ ರಂದು ಸಂಜೆ ೬.೩೦ ರಿಂದ ಬೆಳ್ಳಿ ಬಂಗಾರದ ದಿನದ ಜಾತ್ರಾ ಪ್ರಾರಂಭೋತ್ಸವ ಪೂಜೆ, ಧರ್ಮದರ್ಶಿ ಮಂಡಳಿ ಮತ್ತು ಗ್ರಾಮಸ್ಥರಿಂದ ಜಾತ್ರಾ ಪ್ರಾರಂಭ ಪೂಜೆ, ಪ್ರಾರ್ಥನೆ ನಡೆಯಲಿದೆ ಎಂದು ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್ ತಿಳಿಸಿದ್ದಾರೆ.
ತಾ. ೧೪ರಂದು ಮಕರ ಸಂಕ್ರಮಣ ಕರುವಿನ ಹಬ್ಬದಂದು ಸಂಜೆ ೭ ಸೋಮವಾರಪೇಟೆ, ಜ. ೭: ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಮೀಪದ ಶಾಂತಳ್ಳಿ ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ಜಾತ್ರೋತ್ಸವ ತಾ. ೧೩ ರಿಂದ ೧೭ ರವರೆಗೆ ನಡೆಯಲಿದ್ದು, ದೇವಾಲಯದ ಧರ್ಮದರ್ಶಿ ಮಂಡಳಿ ೬೨ನೇ ಮಹಾ ರಥೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ತಾ. ೧೩ ರಂದು ಸಂಜೆ ೬.೩೦ ರಿಂದ ಬೆಳ್ಳಿ ಬಂಗಾರದ ದಿನದ ಜಾತ್ರಾ ಪ್ರಾರಂಭೋತ್ಸವ ಪೂಜೆ, ಧರ್ಮದರ್ಶಿ ಮಂಡಳಿ ಮತ್ತು ಗ್ರಾಮಸ್ಥರಿಂದ ಜಾತ್ರಾ ಪ್ರಾರಂಭ ಪೂಜೆ, ಪ್ರಾರ್ಥನೆ ನಡೆಯಲಿದೆ ಎಂದು ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್ ತಿಳಿಸಿದ್ದಾರೆ.
ತಾ. ೧೪ರಂದು ಮಕರ ಸಂಕ್ರಮಣ ಕರುವಿನ ಹಬ್ಬದಂದು ಸಂಜೆ ೭ ಸೇವೆ, ಸಂಜೆ ೭.೩೦ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಜರುಗಲಿದೆ.
ತಾ. ೧೬ರಂದು ಪೂರ್ವಾಹ್ನ ೧೧ ಗಂಟೆಗೆ ಶ್ರೀಕುಮಾರಲಿಂಗೇಶ್ವರ ಸ್ವಾಮಿಯ ೬೨ನೇ ಮಹಾ ರಥೋತ್ಸವ ಜರುಗಲಿದೆ. ರಾತ್ರಿ ೭ ಗಂಟೆಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ. ವೇದಮೂರ್ತಿ ಶಿಬರೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಲಿವೆ ಎಂದು ಲೋಕೇಶ್ ಮಾಹಿತಿ ನೀಡಿದ್ದಾರೆ. ತಾ. ೧೭ರಂದು ಮಹಾ ಸಂಪ್ರೋಕ್ಷಣೆ, ವಿವಿಧ ಅರ್ಚನೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾಮಂಗಳಾರತಿ, ಮಂಗಳ ಪ್ರಾರ್ಥನೆ ನಡೆಯಲಿದೆ. ಇದರೊಂದಿಗೆ ಗ್ರಾಮೀಣ ಪ್ರದೇಶದ ರೈತರು ತಾವು ಬೆಳೆದ ಉತ್ತಮವಾದ ತರಕಾರಿ ಸೇರಿದಂತೆ ಇತರೆ ಬೆಳೆಗಳು, ಜೇನು, ಕಸೂತಿ ವಸ್ತುಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಉತ್ತಮ ವಸ್ತುಗಳಿಗೆ ಬಹುಮಾನ ವಿತರಣೆ ಮಾಡಲಾಗುವದು ಎಂದರು.