ಮಡಿಕೇರಿ, ಜ. ೭: ಐದು ವರ್ಷ ದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವ ಕಾರ್ಯಕ್ರಮವು ತಾ. ೧೭ ರಂದು ನಡೆಯಲಿದ್ದು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೊ ಸಿದ್ಧತೆ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಲ್ಸ್ ಪೋಲಿಯೊ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು.
ಪಲ್ಸ್ ಪೋಲಿಯೊ ಹನಿ ಹಾಕಲು ಶಾಲೆಗಳು, ಬಸ್ ನಿಲ್ದಾಣ ಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸು ವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಪಲ್ಸ್ ಪೋಲಿಯೊ ಕಾರ್ಯಕ್ರಮ ದಿನದಂದು ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಸಲಹೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಅವರು ಕೋವಿಡ್-೧೯ ಹಿನ್ನೆಲೆ ಪಲ್ಸ್ ಪೋಲಿಯೊ ಹನಿ ಹಾಕುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಎಂದರು.
ಪೋಷಕರು ಮಗುವನ್ನು ಕರೆತಂದು ಪೋಲಿಯೊ ಹನಿ ಹಾಕಿಸ ಬೇಕು, ಆರೋಗ್ಯ ಕಾರ್ಯಕರ್ತರು ಮುಖ ಮತ್ತು ಕೈಗವಸು ಬಳಸಿ ಮಗುವಿಗೆ ಪೋಲಿಯೊ ಹನಿ ಹಾಕಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಗೋಪಿನಾಥ್ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮವು ತಾ. ೧೭ ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಜನವರಿ, ೧೮, ೧೯ ಮತ್ತು ೨೦ ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ ೧೮ ಮತ್ತು ೧೯ ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೊ ಹನಿ ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದರು. ಪಲ್ಸ್ ಪೋಲಿಯೊ ಹನಿ ಹಾಕುವ ದಿನಗಳಂದು ಪಂಚಾಯತ್ ರಾಜ್, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಕೋರಿದರು. ಜಿಲ್ಲೆಯಲ್ಲಿ ೫ ವರ್ಷದೊಳಗಿನ ಒಟ್ಟು ೩೯,೮೨೦ ಮಕ್ಕಳಿದ್ದು, ೪,೪೦೦ ನಗರ ಪ್ರದೇಶದ ಮಕ್ಕಳು ಹಾಗೂ ೩೫,೪೨೦ ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ ೫ ವರ್ಷದೊಳಗಿನ ೧೦,೪೬೩ ವಲಸೆ ಮಕ್ಕಳಿದ್ದು, ಪೋಲಿಯೊ ಹನಿ ಹಾಕಬೇಕಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪೋಲಿಯೊ ಹನಿ ಹಾಕುವ ನಿಟ್ಟಿನಲ್ಲಿ ೪೬೪ ಬೂತ್ಗಳನ್ನು ಸ್ಥಾಪಿಸಲಾಗಿದೆ. ೪೮ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗಿದೆ. ೬ ಸಂಚಾರಿ ತಂಡವನ್ನು ನಿಯೋಜಿಸ ಲಾಗಿದೆ. ೧೯೬೪ ಮಂದಿ ಪೋಲಿಯೊ ಹನಿ ಹಾಕುವವರು, ೮೬ ಮಂದಿ ಮೇಲ್ವಿಚಾರಕ ರನ್ನು ನಿಯೋಜಿಸ ಲಾಗಿದೆ. ೯೨೮ ಮಂದಿ ಮನೆ ಮನೆಗೆ ತೆರಳಿ ಪೋಲಿಯೊ ಹನಿ ಹಾಕಲಿದ್ದಾರೆ ಎಂದು ಅವರು ತಿಳಿಸಿದರು. ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಯತಿರಾಜ್, ಚೇತನ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಸುಧೀರ್ ನಾಯಕ್, ಐಟಿಡಿಪಿ ಇಲಾಖೆ ಅಧಿಕಾರಿ ಸಿ. ಶಿವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೊ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಿಂಗರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ಪೌರಾಯುಕ್ತ ಎಸ್.ವಿ. ರಾಮದಾಸ್, ಪೊಲೀಸ್ ಇನ್ಸ್ಪೆಕ್ಟ್ರ್ ಜಯರಾಮ್, ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕಿ ಗೀತಾ, ಕಾರ್ಮಿಕ ಇಲಾಖೆಯ ಅಧಿಕಾರಿ ಅನಿಲ್ ಬಗಟಿ, ರಾಷ್ಟಿçÃಯ ಗ್ರಾಮೀಣ ಆರೋಗ್ಯ ಅಧಿಕಾರಿ ದೇವರಾಜು, ದಿವಾಕರ ಇತರರು ಇದ್ದರು.