ಸೋಮವಾರಪೇಟೆ, ಜ. ೭: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಪಟ್ಟಣದ ಅಂಗನವಾಡಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಜಾಗೃತಿ ಕಾರ್ಯಾಗಾರ ನಡೆಯಿತು.
ಸಹಾಯವಾಣಿ ಕೇಂದ್ರದ ಕಾರ್ಯಕರ್ತೆ ಬಿ.ಕೆ. ಕುಮಾರಿ ಅವರು ಕಾಯ್ದೆಯ ಬಗ್ಗೆ ಮಾಹಿತಿ ನೀಡಿ, ೧೮ ವರ್ಷ ತುಂಬದ ಹೆಣ್ಣು ಹಾಗೂ ೨೧ ವರ್ಷ ತುಂಬದ ಗಂಡು ವಿವಾಹ ಮಾಡಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಈ ಬಗ್ಗೆ ಪೋಷಕರು ನಿಗಾ ವಹಿಸುವಂತೆ ತಿಳಿಸಿದರು.
ಪೊಲೀಸ್ ಠಾಣೆಯ ಎಎಸ್ಐ ದಿನೇಶ್ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಮಾಹಿತಿ ಒದಗಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುರುಬಸಮ್ಮ ಅವರು ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ಪ.ಪಂ. ಸದಸ್ಯರಾದ ಬಿ.ಆರ್. ಮಹೇಶ್, ಪಿ.ಕೆ. ಚಂದ್ರು, ಅಂಗನವಾಡಿ ಕಾರ್ಯಕರ್ತೆ ತಾರಾ ಲೋಬೋ, ಸಹಾಯವಾಣಿ ಕೇಂದ್ರದ ಯೋಗೇಶ್, ಸ್ತಿçà ಶಕ್ತಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು. ಇದೇ ಸಂದರ್ಭ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಮಾಸ್ಕ್ಗಳನ್ನು ವಿತರಿಸಲಾಯಿ