ಮಡಿಕೇರಿ, ಜ. ೭: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ತಾ. ೧೨ ರೊಳಗಾಗಿ ಅರ್ಜಿ ಸಲ್ಲಿಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟಿçÃಯ ಸಮಿತಿ ಸದಸ್ಯ ಎಸ್.ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿ, ರಾಜ್ಯ ಸಮಿತಿ ಸದಸ್ಯ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ ಮತ್ತು ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಕುರಿತ ವರದಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ೨೦೧೯ನೇ ಸಾಲಿನ ವರದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವರದಿಯ ಮೂರು ನಕಲು ಪ್ರತಿಯೊಂದಿಗೆ ಅರ್ಜಿಯನ್ನು ತಾ. ೧೨ ರೊಳಗೆ ಅಧ್ಯಕ್ಷ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರ ಬಳಿ ತಲುಪಿಸಬೇಕೆಂದು ಕೋರಲಾಗಿದೆ.