ಸಿದ್ದಾಪುರ, ಜ. ೭: ಹಳೆಯ ಪೊಲೀಸ್ ವಸತಿ ಗೃಹವÀನ್ನು ಕೆಡವಿ ನೂತನ ವಸತಿ ಗೃಹ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ತಿಳಿಸಿದರು.

ಸಿದ್ದಾಪುರÀ ಪೊಲೀಸ್ ಠಾಣೆಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದು, ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದಾಪುರದಲ್ಲಿರುವ ಹಳೆಯ ಪೊಲೀಸ್ ವಸತಿ ಗೃಹಗಳನ್ನು ಕೆಡವಿ ಹೊಸ ವಸತಿ ಗೃಹಗಳ ನಿರ್ಮಾಣ ಕಾರ್ಯಗಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಮುಂದಿನ ದಿನಗಳಲ್ಲಿ ಈ ಕಾರ್ಯ ನಡೆಯಲಿದೆ ಎಂದರು. ಈ ಸಂದರ್ಭ ಸಿದ್ದಾಪುರ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಸಹಾಯಕ ಠಾಣಾಧಿಕಾರಿ ಗಣಪತಿ ಹಾಜರಿದ್ದರು.