ಮಡಿಕೇರಿ, ಜ. ೭: ಜಿಲ್ಲೆಯಲ್ಲಿ ೪ ಶಿಕ್ಷಕರು ಹಾಗೂ ೫ ವಿದ್ಯಾರ್ಥಿ ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿಯೂ ಸಹ ಶಾಲೆಗಳು ಪ್ರಾರಂಭವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ೩೬೪೦ ಶಿಕ್ಷಕರು ಮತ್ತು ೫೪೨೦ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ ೪ ಶಿಕ್ಷಕರಿಗೆ ಮತ್ತು ೫ ವಿದ್ಯಾರ್ಥಿ ಗಳಿಗೆ ಸೋಂಕು ದೃಢಪಟ್ಟಿದೆ. ಈ ಸಂಬAಧ ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಮತ್ತು ಸೋಂಕಿತರನ್ನು ಸಂಪರ್ಕ ತಡೆಯಲ್ಲಿಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.