ಕುಶಾಲನಗರ, ಜ. ೭: ಮೊಬೈಲ್ ವಿಷಯಕ್ಕೆ ಸಂಬAಧಿಸಿದAತೆ ಕೆಲವು ಯುವಕರ ನಡುವೆ ಹೊಟೇಲ್ ಒಂದರಲ್ಲಿ ಮಾರಾಮಾರಿ ನಡೆದ ಘಟನೆ ಕುಶಾಲನಗರ ಸಮೀಪದ ಬೈಲುಕೊಪ್ಪೆಯಲ್ಲಿ ನಡೆದಿದೆ. ಬೈಲುಕೊಪ್ಪೆ ಪೊಲೀಸ್ ಠಾಣೆ ಸಮೀಪದಲ್ಲೇ ಇರುವ ಹೊಟೇಲ್‌ನಲ್ಲಿ ಕ್ಷÄಲ್ಲಕ ವಿಷಯ ಅತಿರೇಕಕ್ಕೆ ತಿರುಗಿ ಅಂಗಡಿ ನಡೆಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ಅಲ್ಲಿನ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ.
ನಂತರ ಮಾಹಿತಿ ತಿಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದವರ ಪತ್ತೆಕಾರ್ಯ ನಡೆಸುತ್ತಿದ್ದಾರೆ. ಹೊಟೇಲ್‌ಗೆ ಬಂದ ಗ್ರಾಹಕರ ಮೇಲೆ ಕೂಡ ಹಲ್ಲೆ ನಡೆಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದು ಪೊಲೀಸರು ಕ್ರಮಕೈಗೊಂಡಿದ್ದಾರೆ.