ಮಡಿಕೇರಿ, ಜ. ೭: ಜಿಲ್ಲೆಯಲ್ಲಿ ತಾ. ೭ ರಂದು ಹೊಸದಾಗಿ ೧೧ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೨೬,೨೪೭ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೮೩೬ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೭೦೪ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೦ ಮಂದಿ ಸಾವನ್ನಪ್ಪಿದ್ದು ೫೨ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೭ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೫ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೫೩ ನಿಯಂತ್ರಿತ ವಲಯಗಳಿವೆ.