ಮಡಿಕೇರಿ, ಜ. ೮ : ರೈತ ವಿರೋಧಿ ಕೃಷಿ ಕಾಯಿದೆಗಳು ಹಾಗೂ ಜನ ವಿರೋಧಿ ವಿದ್ಯುತ್ ಮಸೂದೆಯನ್ನು ಹಿಂಪಡೆಯುವAತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ಜಿಲ್ಲಾಧ್ಯಕ್ಷ ಮಹಾದೇವ ಮಾತನಾಡಿ, ದೇಶದ ರೈತ ಸಮೂಹ ನಡೆಸುತ್ತಿರುವ ಹೋರಾಟ ತೀವ್ರವಾಗುತ್ತಿದೆ. ಬಂಡವಾಳಶಾಹಿ ಪರವಾಗಿರುವ ೪ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಲು ಒತ್ತಾಯಿಸಿ ಕೆಲಸದ ಸ್ಥಳಗಳಲ್ಲಿ ರಾಷ್ಟ್ರಾದ್ಯಂತ ಸಿಐಟಿಯು ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಕೊಡಗು ಸಮಿತಿಯಿಂದಲೂ ಬೆಂಬಲ ನೀಡಲಾಗಿದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಮುಂದುವರಿಸಿದೆ. ಇದುವರೆಗೂ ೭ ಬಾರಿ ರೈತ ಸಂಘಟನೆಗಳ ಜೊತೆ ಮಾತುಕತೆ ನಡೆಸಿದರೂ ೩ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ತಯಾರಿಲ್ಲ. ರೈತರ ಬೆಳೆಗೆ ಬೆಂಬಲ ಬೆಲೆ ನೀಡಲು ಮೋದಿ ಸರ್ಕಾರ ತಯಾರಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಆದ್ದರಿಂದ ರೈತರು ಹೋರಾಟವನ್ನು ತೀವ್ರಗೊಳಿಸಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಸಿಐಟಿಯು ಪ್ರಮುಖರಾದ ಭರತ್, ಎ.ಸಿ ಸಾಬು, ರಮೇಶ್ ಮತ್ತಿತರು ಇದ್ದರು.