ಮಡಿಕೇರಿ, ಜ. ೯ : ಕುಲ್ಲೇಟಿರ ಹಾಕಿ ನಮ್ಮೆ-೨೦೧೮ರ ಸವಿನೆನಪಿನ ಅಂಗವಾಗಿ ತಾ. ೧೦ ರಂದು (ಇಂದು) ನಾಪೋಕ್ಲುವಿನಲ್ಲಿ ನೂತನ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಹಾಕಿ ಹಬ್ಬದ ಕಾರ್ಯದರ್ಶಿ ಕುಲ್ಲೇಟ್ಟಿರ ಅಜಿತ್ ನಾಣಯ್ಯ ತಿಳಿಸಿದ್ದಾರೆ.

ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಸದ ಪ್ರತಾಪ್ ಸಿಂಹ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ಕುಲ್ಲೇಟಿರ ಹಾಕಿ ನಮ್ಮೆಯ ಅಧ್ಯಕ್ಷ ಕುಲ್ಲೇಟಿರ ಪಿ. ಮಂದಪ್ಪ (ಶಂಭು) ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಮಂಡೇಪAಡ ಸುನೀಲ್ ಸುಬ್ರಮಣಿ, ಶಾಂತೆಯAಡ ವೀಣಾಅಚ್ಚಯ್ಯ, ನಾಪೋಕ್ಲು ಕ್ಷೇತ್ರದ ಜಿ.ಪಂ ಸದಸ್ಯ ಪಾಡಿಯಮ್ಮಂಡ ಮುರುಳಿ ಕರುಂಬಮ್ಮಯ್ಯ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚ್ಚಟ್ಟೋಳಂಡ ಮನುಮುತ್ತಪ್ಪ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಅಜಿತ್ ನಾಣಯ್ಯ ಮಾಹಿತಿ ನೀಡಿದ್ದಾರೆ.