ಶನಿವಾರಸಂತೆ, ಜ. ೯: ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ ಗ್ರಾಮದ ನಿವಾಸಿ ವಿವಾಹಿತ ಶಾಂತಪ್ಪ (೩೮) ಎಂಬವರು ವಿಷ ಸೇವಿಸಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರ ಸಂಬAಧಿ ಹೆಚ್.ಆರ್. ರುದ್ರಯ್ಯ ಶನಿವಾರಸಂತೆ ಪೊಲೀಸ್ ಠಾಣೆಗೆ ನೀಡಿದ ದೂರಿನಡಿ ಶನಿವಾರಸಂತೆಯ ಠಾಣಾಧಿಕಾರಿ ಹೆಚ್.ಇ. ದೇವರಾಜ್ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.