ಮಡಿಕೇರಿ, ಜ.೯ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ‘ಶಕ್ತಿ’ ಗೆ ಖಚಿತಪಡಿಸಿವೆೆ. ಕೊಡವರು ಗೋಮಾಂಸ ಸೇವಿಸುತ್ತಾರೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಬಿಜೆಪಿ ಮುಖಂಡ, ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ದೂರು ದಾಖಲಿಸಿದ್ದರು. ಐಪಿಸಿ ಸೆಕ್ಷನ್ ೧೫೩ ಅಡಿಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು.