ಮಡಿಕೇರಿ, ಜ.೧೧ : ಅಕಾಲಿಕ ಮಳೆಯಿಂದ ಕೊಡಗಿನ ರೈತರು ಹಾಗೂ ಬೆಳೆಗಾರರು ಸಾಕಷ್ಟು ಕಷ್ಟ, ನಷ್ಟಗಳನ್ನು ಅನುಭವಿಸುತ್ತಿರುವುದರಿಂದ ಸರ್ಕಾರ ತುರ್ತಾಗಿ ಒಂದು ಸಾವಿರ ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಪಕ್ಷದ ಪ್ರಮುಖರು ಪ್ರಾಕೃತಿಕ ವಿಕೋಪದಿಂದ ಕೊಡಗಿನಲ್ಲಿ ಆಗಿರುವ ಬೆಳೆ ನಷ್ಟದ ಬಗ್ಗೆ ಸಮೀಕ್ಷೆ ನಡೆಸಲು ವಿಶೇಷ ಅಧಿಕಾರಿಗಳ ಹಾಗೂ ತಜ್ಞರ ಸಮಿತಿಯನ್ನು ಜಿಲ್ಲೆಗೆ ಕಳುಹಿಸಿಕೊಡಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ವನ್ಯ ಪ್ರಾಣಿಗಳ (ಮೊದಲ ಪುಟದಿಂದ) ಹಾವಳಿ ಒಂದೆಡೆಯಾದರೆ ಕಳೆದ ನಾಲ್ಕು ವರ್ಷಗಳಿಂದ ಪ್ರಾಕೃತಿಕ ವಿಕೋಪಗಳಿಂದ ಕೊಡಗಿನ ರೈತಾಪಿ ವರ್ಗ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ಕೋವಿಡ್ ಪರಿಸ್ಥಿತಿಯಿಂದ ನಷ್ಟ ಎದುರಾಗಿದೆ. ೨೦೨೧ರಲ್ಲಿ ಆಶಾದಾಯಕ ಬೆಳವಣಿಗೆಗಳು ಇರಬಹುದೆಂದು ಭಾವಿಸಲಾಗಿತ್ತಾದರು, ಆರಂಭದಲ್ಲೆ ಅಕಾಲಿಕ ಮಳೆ ಸುರಿದು ಕಾಫಿ, ಭತ್ತ, (ಮೊದಲ ಪುಟದಿಂದ) ಹಾವಳಿ ಒಂದೆಡೆಯಾದರೆ ಕಳೆದ ನಾಲ್ಕು ವರ್ಷಗಳಿಂದ ಪ್ರಾಕೃತಿಕ ವಿಕೋಪಗಳಿಂದ ಕೊಡಗಿನ ರೈತಾಪಿ ವರ್ಗ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ಕೋವಿಡ್ ಪರಿಸ್ಥಿತಿಯಿಂದ ನಷ್ಟ ಎದುರಾಗಿದೆ. ೨೦೨೧ರಲ್ಲಿ ಆಶಾದಾಯಕ ಬೆಳವಣಿಗೆಗಳು ಇರಬಹುದೆಂದು ಭಾವಿಸಲಾಗಿತ್ತಾದರು, ಆರಂಭದಲ್ಲೆ ಅಕಾಲಿಕ ಮಳೆ ಸುರಿದು ಕಾಫಿ, ಭತ್ತ, ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಹುಲಿ, ಚಿರತೆ, ಕಾಡಾನೆ, ಕಾಡುಹಂದಿ ಸೇರಿದಂತೆ ವನ್ಯಜೀವಿಗಳ ಉಪಟಳದಿಂದ ಸಾವು, ನೋವುಗಳು ಸಂಭವಿಸುತ್ತಿರುವುದಲ್ಲದೆ ಕೊಡಗಿನ ರೈತರು ಹಾಗೂ ಬೆಳೆಗಾರರಿಗೆ ಸಾಕಷ್ಟು ನಷ್ಟವಾಗುತ್ತಿದೆ. ಆದ್ದರಿಂದ ವನ್ಯಜೀವಿ ಉಪಟಳ ತಡೆಗೆ ಶಾಶ್ವತ ಪರಿಹಾರ ಅಥವಾ ಯೋಜನೆಯನ್ನು ರೂಪಿಸಲು ವಿಶೇಷ ತಜ್ಞರ ಸಮಿತಿಯನ್ನು ಕೊಡಗು ಜಿಲ್ಲೆಗೆ ಕಳುಹಿಸಿ ವನ್ಯಜೀವಿ ಉಪಟಳದ ಬಗ್ಗೆ ವರದಿಯನ್ನು ಸಿದ್ಧಪಡಿಸಬೇಕು.

ಕೊಡಗಿನ ರೈತರು, ಬೆಳೆಗಾರರು ಹಾಗೂ ಕಾರ್ಮಿಕ ವರ್ಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೊಡಗು ಜಿಲ್ಲೆಯಲ್ಲೇ ಅರಣ್ಯ ಸಚಿವರು, ಕಂದಾಯ ಸಚಿವರು, ಕಾರ್ಮಿಕ ಸಚಿವರು, ಕೃಷಿ ಸಚಿವರು ಹಾಗೂ ಈ ಇಲಾಖೆಗೆ ಸಂಬAಧಿಸಿದ ರಾಜ್ಯದ ಹಿರಿಯ ಅಧಿಕಾರಿಗಳ ವಿಶೇಷ ಸಭೆಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಪ್ರಮುಖರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಸಂಯೋಜಕ ಹೆಚ್.ಎಂ. ನಂದಕುಮಾರ್, ಜಿಲ್ಲಾ ವಕ್ತಾರ ಟಿ.ಈ.ಸುರೇಶ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಾರ್ವತಿ ಫ್ಯಾನ್ಸಿ, ಪರಿಶಿಷ್ಟ ಜಾತಿ ಘಟಕದ ನಗರಾಧ್ಯಕ್ಷ ಮುದ್ದುರಾಜ್ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.