ಸುಂಟಿಕೊಪ್ಪ, ಜ.೧೧ : ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿಯ ತಿರುವಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಂಟಿಕೊಪ್ಪ ಕಡೆಯಿಂದ ಮಡಿಕೇರಿ ತೆರಳುತ್ತಿದ್ದಲಾರಿ, ಮಡಿಕೇರಿಯಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಕಾರು ಸಂಪೂರ್ಣ ಜಖಂಗೊAಡಿದೆ. ಮಳೆಯ ಸುರಿಯುತ್ತಿದ್ದ ಕಾರಣ ನಿಯಂತ್ರಣ ಕಳೆದುಕೊಂಡÀ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರೊಂದಿಗೆ ಕೆದಕಲ್ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

-ಚಿತ್ರ: ಸತೀಶ್