ಸೋಮವಾರಪೇಟೆ, ಜ. ೧೧: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬAಧಿಸಿದAತೆ ಕೂಡಲೇ ಸರ್ಕಾರ ಜನತೆಗೆ ನೈಜಾಂಶವನ್ನು ತಿಳಿಸಬೇಕು. ಜಿಲ್ಲೆಯ ಬಿಜೆಪಿ ಶಾಸಕರುಗಳು ಹಾಗೂ ಲೋಕಸಭಾ ಸದಸ್ಯರು ವರದಿಗೆ ಸಂಬAಧಿಸಿದAತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಲುವನ್ನು ಜನತೆಯ ಎದುರು ಬಹಿರಂಗಪಡಿಸಬೇಕೆAದು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎಂ. ಲೋಕೇಶ್ ಆಗ್ರಹಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಕಸ್ತೂರಿ ರಂಗನ್ ವರದಿ ಜಾರಿಯಾದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಜಿಲ್ಲೆಯ ಶಾಸಕರು ಹಾಗೂ ಸಂಸದರು ಹೇಳಿಕೆ ನೀಡಿದ್ದರು. ಇದೀಗ ಕೇಂದ್ರ ಹಾಗೂ ರಾಜ್ಯದಲ್ಲೂ ಬಿಜೆಪಿ ಸರ್ಕಾರವೇ ಇದ್ದರೂ ಕಸ್ತೂರಿ ರಂಗನ್ ವರದಿ ಅನುಷ್ಠಾನದ ಆತಂಕ ದೂರವಾಗಿಲ್ಲ. ಕಸ್ತೂರಿರಂಗನ್ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಕೊಟ್ಟ ಮಾತಿನಂತೆ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾರ್ವಜನಿಕರೊಂದಿಗೆ ಸೇರಿ ಹೋರಾಟಕ್ಕೆ ಧುಮುಕಬೇಕು ಎಂದು ಲೋಕೇಶ್ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭ ಕಸ್ತೂರಿ ರಂಗನ್ ವರದಿಯನ್ನು ಕೊಡಗಿನಲ್ಲಿ ಅನುಷ್ಠಾನಗೊಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ತನ್ನದು ಎಂದು ಸಂಸದರು ತಿಳಿಸಿದ್ದರು. ಆದರೆ ಇಂದಿಗೂ ವರದಿ ಅನುಷ್ಠಾನಗೊಳ್ಳದ ಬಗ್ಗೆ ನಿಖರತೆ ಇಲ್ಲ. ಈ ವಿಷಯದ ಬಗ್ಗೆ ಸಂಸದರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದರೊಂದಿಗೆ ಸಿ ಮತ್ತು ಡಿ ಜಾಗದ ಸಮಸ್ಯೆಯಿಂದಾಗಿ ಫಾರಂ ನಂಬರ್ ೫೩ ಹಾಗೂ ೫೭ರಲ್ಲಿ ಅರ್ಜಿ ಸಲ್ಲಿಸಿದ ಬಡ ರೈತರಿಗೆ ಇಂದಿಗೂ ಹಕ್ಕುಪತ್ರ ಒದಗಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಜಿಲ್ಲೆಯ ಶಾಸಕರುಗಳು ಕಂದಾಯ ಸಚಿವರೊಂದಿಗೆ ಮಾತುಕತೆ ನಡೆಸಬೇಕು ಎಂದು ಒತ್ತಾಯಿಸಿರುವ ಲೋಕೇಶ್, ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾದರೆ ಕಾಂಗ್ರೆಸ್ನಿAದ ಜಿಲ್ಲಾದ್ಯಂತ ಹೋರಾಟ ಸಂಘಟಿಸಲಾಗುವದು ಎಂದು ಎಚ್ಚರಿಸಿದ್ದಾರೆ.