ಮಡಿಕೇರಿ, ಜ. ೧೧: ತಲಕಾವೇರಿಯಲ್ಲಿ ಅಗಸ್ತö್ಯಲಿಂಗೇಶ್ವರ ಭಗ್ನಗೊಂಡು ಹೊರತೆಗೆದಿರುವ ವಿಚಾರದಲ್ಲಿ ಆರೋಪ ಕೇಳಿ ಬಂದಿದೆ. ಈ ಸಂಬAಧ ಆಗಮಶಾಸ್ತ್ರ ಪಂಡಿತರ ಮೂಲಕ ವರದಿ ಪಡೆದುಕೊಳ್ಳಲಾಗಿದೆ. ಅಧಿಕಾರಿಗಳು ಹಾಗೂ ಧಾರ್ಮಿಕ ಮುಖಂಡ ರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ, ಯಾವುದೇ ಗೊಂದಲ ಇಲ್ಲದೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನ ತಲಕಾವೇರಿಯಲ್ಲಿ ಗಜಗಿರಿ ಬೆಟ್ಟ ಕುಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಗುಡ್ಡ ಕುಸಿತಕ್ಕೆ ಇಂಗು ಗುಂಡಿ ಕಾರಣ ವೆಂದು ಭಾರತೀಯ ಭೂವಿಜ್ಞಾನ ಸಮೀಕ್ಷೆ ತಂಡದ ತಜ್ಞರು ವರದಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪೂಜಾರಿ, ಸ್ಥಳ ತನಿಖೆ ಮಾಡಿ ವರದಿ ತರಿಸಿಕೊಂಡು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

(ಮೊದಲ ಪುಟದಿಂದ) ರಾಜ್ಯ ಸರ್ಕಾರದ ಸಪ್ತಪದಿ ಕಾರ್ಯಕ್ರಮ ಕೊರೊನಾ ಕಾರಣದಿಂದ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ತಿಂಗಳಿಗೆ ೨ ದಿನ ಕಾರ್ಯಕ್ರಮ ನಡೆಸಲಾಗುತ್ತದೆ. ವಿಶೇಷ ಮುಹೂರ್ತಗಳಿದ್ದರೆ ಆ ದಿನಗಳಲ್ಲೇ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.