ಕೂಡಿಗೆ, ಜ. ೧೨: ಸಮಾಜದ ಓರೆ ಕೋರೆಗಳನ್ನು ಪದವಿಯ ನಂತರ ತಿದ್ದುವ ವಿದ್ಯಾರ್ಥಿಗಳು ತನ್ನ ಬದುಕಿಗೆ ಪೂರಕವಾಗುವ ಅಂಶಗಳನ್ನು ಆಯ್ಕೆ ಮಾಡುವಾಗ ಉದ್ಯೋಗ ಅಥವಾ ಉದ್ಯಮಗಳಲ್ಲಿ ತೊಡಗಿಸಿಕೊಂಡರೆ ಆದರ್ಶ ವ್ಯಕ್ತಿಯಾಗಿ ಬಾಳಲು ಸಹಕಾರಿ ಯಾಗುತ್ತದೆ. ಜೊತೆಯಲ್ಲಿ ಕನ್ನಡದ ಪುಸ್ತಕಗಳನ್ನು ಮತ್ತು ಪತ್ರಿಕೆಗಳು ಮುಂದಿನ ದಾರಿಗೆ ಮಾರ್ಗಸೂಚಿ ಗಳಾಗುತ್ತವೆ ಎಂದು ಕುಶಾಲ ನಗರದ ಉದ್ಯಮಿ ರಂಗಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸರಕಾರಿ ಮಹಿಳಾ ಪದವಿ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಿ. ಎಂ.ಜೆ. ಪದ್ಮನಾಭ ಕಾಮತ್ ದತ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಹಿತ್ಯಾಸಕ್ತ ಉದ್ಯಮಿಗಳು ಎಂಬ ವಿಷಯದಡಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಉದ್ಘಾಟನೆ ಯನ್ನು ಮಹಿಳಾ ಕಾಲೇಜಿನ ಕನ್ನಡ ಸಾಹಿತ್ಯ ಪರಿಷತ್ತು ಸರಕಾರಿ ಮಹಿಳಾ ಪದವಿ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಿ. ಎಂ.ಜೆ. ಪದ್ಮನಾಭ ಕಾಮತ್ ದತ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಹಿತ್ಯಾಸಕ್ತ ಉದ್ಯಮಿಗಳು ಎಂಬ ವಿಷಯದಡಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಉದ್ಘಾಟನೆ ಯನ್ನು ಮಹಿಳಾ ಕಾಲೇಜಿನ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ವಹಿಸಿದ್ದರು. ಪ್ರಾಸ್ತಾವಿಕ ನುಡಿಗಳನ್ನು ಕಾಲೇಜಿನ ಉಪನ್ಯಾಸಕಿ ಡಾ ಕೋರನ ಸರಸ್ವತಿ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಉದ್ಯಮಿ ಸುಕುಮಾರ್ ವಿಶೇಷ ಆಹ್ವಾನಿತರಾಗಿ ಕೇಶವಕಾಮತ್ ಕುಶಾಲನಗರ ತಾಲೂಕು ಕಸಾಪ ಕಾರ್ಯದರ್ಶಿ ನಾಗೇಶ್ ಜಿಲ್ಲಾ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ, ಕಾಲೇಜಿನ ಉಪನ್ಯಾಸಕರಾದ ನಿರ್ಮಲ, ಕನ್ನಿಕಾ, ಮಹೇಶ್ ಸೇರಿದಂತೆ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಹಾಜರಿದ್ದರು.