ಮಡಿಕೇರಿ, ಜ. ೧೨ : ತಂತ್ರಾAಶದ ಮೂಲಕ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಪ್ರಕಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು, ಆಯೋಗದ ಸಾಮಾನ್ಯ ಹಾಗೂ ವಿಶೇಷ ಆದೇಶಕ್ಕೆ ಒಳಪಟ್ಟು ಗ್ರಾ.ಪಂಗಳಿಗೆ ವರ್ಗವಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಮೀಸಲಿರಿಸಿ ಅಧಿಸೂಚಿಸಬೇಕಾಗಿದ್ದು, ಮೀಸಲಾತಿ ನಿಗದಿಪಡಿಸುವಾಗ ೧೯೯೩ನೇ ಸಾಲಿನಲ್ಲಿ ಚುನಾವಣೆ ನಡೆದ ನಂತರ ಮೊದಲ ಮೀಸಲಾತಿಯಿಂದ ೨೦೧೫ನೇ ಸಾಲಿನ ಮೀಸಲಾತಿ ತನಕ ಪರಿಗಣಿಸಿ ಗೊಂದಲವಿಲ್ಲದೆ, ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಹುದ್ದೆ ಮೀಸಲಾತಿ ನಿಗದಿಪಡಿಸಬೇಕೆಂದು ಸೂಚಿಸಲಾಗಿದೆ.