ಸೋಮವಾರಪೇಟೆ, ಜ. ೧೨: ಜಗತ್ತಿನ ಗಮನವನ್ನು ಭಾರತದತ್ತ ಸೆಳೆದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಸ್ಮರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ನಿರಂತರವಾಗಿರಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಇಲ್ಲಿನ ವಿವೇಕಾನಂದ ಪ್ರತಿಮೆ ಬಳಿ ಆಯೋಜಿಸಿದ್ದ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ತಾನು ಈ ಹಿಂದೆ ಕ್ರೀಡಾ ಸಚಿವರಾಗಿದ್ದ ಸಂದರ್ಭ ಯುವ ನೀತಿಯನ್ನು ಪ್ರಕಟಿಸಿ, ರಾಜ್ಯದಾದ್ಯಂತ ವಿವೇಕಾನಂದರ ಜನ್ಮದಿನಾಚರಣೆ ಯನ್ನು ಆಯೋಜಿಸುವ ಮೂಲಕ ವೀರ ಸನ್ಯಾಸಿಯ ಬಗ್ಗೆ ಯುವ ಜನಾಂಗದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲಾಗಿತ್ತು ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ವಿವೇಕಾನಂದರು ಯುವಕರಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದರು. ದೇಶಾದ್ಯಂತ ಸಂಚರಿಸಿ ಧಾರ್ಮಿಕ ಪ್ರಜ್ಞೆಯನ್ನು ಉದ್ದೀಪನಗೊಳಿಸಿದ ಮಹಾನ್ ಸಂತ ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಮುಖ್ಯಾಧಿಕಾರಿ ನಾಚಪ್ಪ, ರೋಟರಿ ಸಂಸ್ಥೆ ಅಧ್ಯಕ್ಷ ಲಿಖಿತ್ ದಾಮೋಧರ್, ಜಯಂತ್ಯೋತ್ಸವ ಸಮಿತಿ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಬಿ.ಆರ್. ಮೃತ್ಯುಂಜಯ, ನೂತನ ಅಧ್ಯಕ್ಷ ಪಿ.ಕೆ. ರವಿ, ಉದ್ಯಮಿ ಕಾರ್ತಿಕ್ ಸದಾನಂದ್, ವಿವೇಕಾನಂದ ಎಜುಕೇಷನಲ್ ಟ್ರಸ್ಟ್ನ ಜ್ಞಾನವಿಕಾಸ ಶಾಲೆಯ ಸಂತೋಷ್ ಹಾಗೂ ಸಹ ಶಿಕ್ಷಕರು, ಪ.ಪಂ. ಸದಸ್ಯರು, ಗ್ರಾ.ಪಂ. ಸದಸ್ಯರು, ಮೋಟಾರ್ ಯೂನಿಯನ್, ಆಟೋ ಯೂನಿಯನ್, ಇನ್ನರ್ ವೀಲ್, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ೭ ವರ್ಷಗಳ ಕಾಲ ಸೇವೆ ಸಲ್ಲಿಸಿ, ಇತ್ತೀಚೆಗಷ್ಟೇ ನಿಧನರಾದ ಬಿ.ಎಸ್. ಸದಾನಂದ್ ಅವರಿಗೆ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಮಡಿಕೇರಿ: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ, ವೀರಾಜಪೇಟೆ ತಾಲೂಕು ಯುವ ಒಕ್ಕೂಟ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆ ಹಾಗೂ ಹಾಕತ್ತೂರು ತೊಂಭತ್ತುಮನೆ ಮಾರ್ಗದರ್ಶಿ ತ್ರಿನೇತ್ರ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೧೫೮ನೇ ಜಯಂತಿ ಪ್ರಯುಕ್ತ ರಾಷ್ಟಿçÃಯ ಯುವ ದಿನಾಚರಣೆ ಹಾಗೂ ಯುವ ಸಪ್ತಾಹ ಉದ್ಘಾಟನಾ ಸಮಾರಂಭವು ಮಂಗಳವಾರ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶ ಕಂಡ ಅಪ್ರತಿಮ ಹಾಗೂ ಆಧ್ಯಾತ್ಮಿಕರಲ್ಲಿ ಶ್ರೇಷ್ಠರಾದ ಸ್ವಾಮಿ ವಿವೇಕಾನಂದರ ಆದರ್ಶ ತತ್ವಗಳನ್ನು, ನಡೆ-ನುಡಿಗಳನ್ನು ವಿದ್ಯಾರ್ಥಿಗಳು ಪಾಲಿಸುವಂತಾಗ ಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕ ಗುರುಸ್ವಾಮಿ ಮಾತನಾಡಿ, ಯುವ ಜನರಲ್ಲಿ ಅಚಲವಾದ ಗುರಿ ಇರಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕು, ಇದರಿಂದ ಯುವ ಶಕ್ತಿಯು ದೇಶವನ್ನು ಉನ್ನತ ಮಟ್ಟದಲ್ಲಿ ಕೊಂಡೊಯ್ಯಲು ಸಹಕಾರಿಯಾಗಲಿದೆ ಎಂದರು.
ಹಾಕತ್ತೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಭವಾನಿ ಶಂಕರ್ ಅವರು ಸ್ವಾಮಿ ವಿವೇಕಾನಂದರ ಬಗ್ಗೆ ಉಪನ್ಯಾಸ ಮಾಡಿದರು. ೨೦೧೯-೨೦ರಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಾಕತ್ತೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರೋತ್ಸಾಹಧನ ವಿತರಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಾಕತ್ತೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮಚಂದ್ರ, ಶಿಕ್ಷಕಿ ವನಜಾ, ಎಸ್ಡಿಎಂಸಿ ಅಧ್ಯಕ್ಷೆ ಪಿ.ಎಸ್. ಸುನೀತ, ಪಿಡಿಒ ಪ್ರಕಾಶ್ ಹಾಗೂ ನೂತನವಾಗಿ ಆಯ್ಕೆಯಾಗಿರುವ ಹಾಕತ್ತೂರು ಮತ್ತು ಮೆಕೇರಿ ಗ್ರಾಮ ಪಂಚಾಯಿತಿಯ ಸದಸ್ಯರುಗಳು ಇತರರು ಇದ್ದರು.
ಜಿಲ್ಲಾ ಯುವ ಒಕ್ಕೂಟ ಹಾಗೂ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ. ಸುಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ತ್ರಿನೇತ್ರ ಯುವಕ ಸಂಘದ ಉಪಾಧ್ಯಕ್ಷರಾದ ಕೆ.ವೈ. ಜಲೀಲ್ ಅವರು ಸ್ವಾಗತಿಸಿದರು. ಬಿ.ಎಂ. ಜಯಂತಿ ಅವರು ವಂದಿಸಿದರು. ತ್ರಿನೇತ್ರ ಯುವಕ ಸಂಘದ ಕಾರ್ಯದರ್ಶಿ ಎಂ.ಎA. ಅಬುಬಕರ್ ನಿರೂಪಿಸಿದರು.
ಕುಶಾಲನಗರ: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ, ವಿದ್ಯಾರ್ಥಿ ಸಮಿತಿ, ಯುವ ರೆಡ್ ಕ್ರಾಸ್, ಸ್ಕೌಟ್ ಅಂಡ್ ಗೈಡ್ಸ್, ಎನ್ಎಸ್ಎಸ್ ಸಮಿತಿಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮದಿನ ಅಂಗವಾಗಿ ರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿಯ ಸಹಾಯಕ ಪ್ರಾಧ್ಯಾಪಕ ಬಿ.ಆರ್. ಶಶಿಧರ್ ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿಯ ಸಹಾಯಕ ಪ್ರಾಧ್ಯಾಪಕ ಬಿ.ಆರ್. ಶಶಿಧರ್ ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ವಿಚಾರವಾಗಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಸಂಕೋಚ ಮನೋಭಾವವನ್ನು ತೊರೆದು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಲ್ಲಿಯೇ ಸ್ವಾಮಿ ವಿವೇಕಾನಂದರ ಬಗ್ಗೆ ಅಧ್ಯಯನ ಮಾಡಿದಾಗ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಾಧ್ಯವಿದೆ. ಮಹಾತ್ಮ ಎಂದು ಕರೆಯುವ ಗಾಂಧಿಜೀಯು ಪರಿವರ್ತನೆಯಾಗಲು ವಿವೇಕಾನಂದರ ಆದರ್ಶ, ಜೀವನ ಸಾಧನೆಗಳೇ ಕಾರಣವೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಧ್ಯಾನ, ಯೋಗಗಳಿಂದ ಮನಸ್ಸನ್ನು ನಿಯಂತ್ರಿಸಬಹುದಾಗಿದೆ ಎಂದು ಹಿತನುಡಿಯನ್ನಾಡಿದರು.
ಉದ್ಯಮಿ ಚಂದನ್ಕಾಮತ್ ಮಾತನಾಡಿ, ಮಾಡುವ ಕೆಲಸದಲ್ಲಿ ಶ್ರದ್ಧೆಯಿದ್ದರೆ ಸಾಧನೆ ಮಾಡಬಹುದು ಎಂದರು.
ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚೈತ್ರ ವಿವೇಕಾನಂದರು ಮದರಾಸಿನಲ್ಲಿ ಮಾಡಿದ ಭಾಷಣದ ಸಮಗ್ರ ಅಧ್ಯಯನವನ್ನು ವಾಚಿಸಿದರು. ಕೊಡವ ಭಾಷೆಯಲ್ಲಿ ಹೊಟ್ಟೆಯಂಗಡ ಸುಂದರಿAiÀiವರು ಬರೆದ ಪುಸ್ತಕದ ಅಧ್ಯಯನವನ್ನು ವಿದ್ಯಾರ್ಥಿನಿ ಬೇಬಿಶ್ರಿ ವಾಚಿಸಿದರು.
ಡಾ. ರಾಜೇಂದ್ರಪ್ರಸಾದ್ ನಿರೂಪಿಸಿದರು. ಆಶ್ರಮದ ಹಿರಿಯ ಸ್ವಾಮಿ ಪರಹಿತನಂದಾಜೀ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.