೧ ಸಾವು

ಮಡಿಕೇರಿ, ಜ. ೧೨: ಜಿಲ್ಲೆಯಲ್ಲಿ ಕೋವಿಡ್ ಸಂಬAಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ ೮೧ ಕ್ಕೇರಿದೆ. ಮೂರ್ನಾಡಿನ ೬೨ ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ತಾ. ೧೨ ರಂದು ಹೊಸದಾಗಿ ೯ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೦,೯೯೯ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೮೮೯ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೭೪೪ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೬೪ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೧೪ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೫೦ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೫೦ ನಿಯಂತ್ರಿತ ವಲಯಗಳಿವೆ.