ಕಣಿವೆ, ಜ. ೧೨: ಹಾರಂಗಿ ಜಲಾಶಯದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ತಾಲೂಕಿನ ಕಂದಾಯ ಇಲಾಖೆಯ ಜಮಾಬಂದಿ ಕಾರ್ಯಕ್ರಮ ನಡೆಯಿತು.

ಕಂದಾಯ ಇಲಾಖೆಯ ೨೦೧೯-೨೦ನೇ ಸಾಲಿನ ಕಂದಾಯ ವಸೂಲಾತಿ ಲೆಕ್ಕಪತ್ರ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಪ್ರಸಕ್ತ ಅವಧಿಯ ಕಂದಾಯ ನಿಗದಿಗೆ ಅನುಮೋದನೆ ನೀಡಿದರು.

ಇದೇ ಸಂದರ್ಭ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರ ಯೋಗಕ್ಷೇಮ ವಿಚಾರಿಸಿದರಲ್ಲದೇ ಸಿಬ್ಬಂದಿಗಳ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜು, ತಾಲೂಕಿನ ಆರು ಹೋಬಳಿಗಳಾದ ಕುಶಾಲನಗರ, ಶನಿವಾರಸಂತೆ, ಕೊಡ್ಲಿಪೇಟೆ, ಶಾಂತಳ್ಳಿ, ಸುಂಟಿಕೊಪ್ಪ ಹಾಗೂ ಸೋಮವಾರಪೇಟೆ ಹೋಬಳಿಗಳ ಉಪತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಉಪಸ್ಥಿತರಿದ್ದರು.