ವೀರಾಜಪೇಟೆ, ಜ. ೧೨: ಕೊಡವ ಜನಾಂಗದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಹೇಳನ ಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆ ವೀರಾಜಪೇಟೆ ನಗರ ಠಾಣೆಯಲ್ಲಿ ಡಿ. ೨೨ ರಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮನೆಯಪಂಡ ಕಾಂತಿ ಸತೀಶ್ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ನಗರ ಠಾಣಾಧಿಕಾರಿ ಜಗದೀಶ್ ದೂಳಶೆಟ್ಟಿ ಇಲಾಖಾ ಕಾನೂನು ತಜ್ಞರ ಸಲಹೆ ಪಡೆದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಮಡಿಕೇರಿಯಲ್ಲಿ ದಾಖಲಾದ ಮತ್ತೊಂದು ದೂರಿನ ಜೊತೆಯಲ್ಲಿ ಘಟನೆ ನಡೆದ ಸ್ಥಳ ಅಶೋಕಪುರಂ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.