ನಾಪೋಕ್ಲು, ಜ. ೧೨: ಮಡಿಕೇರಿ ಗ್ರಾಮಾಂತರ ರೈತ ಮೋರ್ಚಾ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್ ಅವರ ನೇತೃತ್ವದಲ್ಲಿ ಬೆಳೆಗಾರರ ಒಕ್ಕೂಟದ ನಿಯೋಗ ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿಯವರನ್ನು ಭೇಟಿ ಮಾಡಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಬೆಳೆಗಾರರ ಒಕ್ಕೂಟದ ಕೆ. ಮಧುಬೋಪಣ್ಣ, ಎನ್.ಎಸ್. ಉದಯಶಂಕರ್, ಬಿ.ಎನ್. ಮೇದಪ್ಪ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್‌ಕುಮಾರ್, ರಾಜ್ಯ ಪದಾಧಿಕಾರಿಗಳು ಹಾಜರಿದ್ದರು.