ಮಡಿಕೇರಿ, ಜ. ೧೩: ಕೋವಿಡ್ ಲಸಿಕಾ ಅಭಿಯಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿ ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನ ಸಂಬAಧ ಬುಧವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಕೋವಿಡ್ ಲಸಿಕೆ ಪೂರೈಕೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ನಿಯಮಾನುಸಾರ ಜಿಲ್ಲೆಗೆ ತರಿಸಿಕೊಳ್ಳಬೇಕು. ಲಸಿಕೆ ದಾಸ್ತಾನು ಸಂಬAಧಿಸಿದAತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು, ಕೋವಿಡ್ ಲಸಿಕಾ ಅಭಿಯಾನವನ್ನು ಗಂಭೀರ ವಾಗಿ ಪರಿಗಣಿಸಬೇಕು. ಯಾವುದೇ ರೀತಿಯ ವದಂತಿಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ೫,೦೪೯ ಹಾಗೆಯೇ ೧,೫೧೧ ಖಾಸಗಿ ಆಸ್ಪತ್ರೆ ವ್ಯಾಪ್ತಿಯ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ, ಜಿಲ್ಲೆಯ ಪ್ರಾಥಮಿಕ, ಸಮುದಾಯ ಹಾಗೂ ವೈದ್ಯಕೀಯ ಶಿಕ್ಷಣ ವ್ಯಾಪ್ತಿಯ ಒಟ್ಟು ೩೯ ಕಡೆಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ ೧೪ ಮಂದಿ ಚಿಕಿತ್ಸೆ ಮಡಿಕೇರಿ, ಜ. ೧೩: ಕೋವಿಡ್ ಲಸಿಕಾ ಅಭಿಯಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿ ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನ ಸಂಬAಧ ಬುಧವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಕೋವಿಡ್ ಲಸಿಕೆ ಪೂರೈಕೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ನಿಯಮಾನುಸಾರ ಜಿಲ್ಲೆಗೆ ತರಿಸಿಕೊಳ್ಳಬೇಕು. ಲಸಿಕೆ ದಾಸ್ತಾನು ಸಂಬAಧಿಸಿದAತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು, ಕೋವಿಡ್ ಲಸಿಕಾ ಅಭಿಯಾನವನ್ನು ಗಂಭೀರ ವಾಗಿ ಪರಿಗಣಿಸಬೇಕು. ಯಾವುದೇ ರೀತಿಯ ವದಂತಿಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ೫,೦೪೯ ಹಾಗೆಯೇ ೧,೫೧೧ ಖಾಸಗಿ ಆಸ್ಪತ್ರೆ ವ್ಯಾಪ್ತಿಯ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ, ಜಿಲ್ಲೆಯ ಪ್ರಾಥಮಿಕ, ಸಮುದಾಯ ಹಾಗೂ ವೈದ್ಯಕೀಯ ಶಿಕ್ಷಣ ವ್ಯಾಪ್ತಿಯ ಒಟ್ಟು ೩೯ ಕಡೆಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ ೧೪ ಮಂದಿ ಚಿಕಿತ್ಸೆ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಡಿ ವಿಶೇಷ ಅನುದಾನ ಬಿಡುಗಡೆಯಾಗಿದ್ದು, ಈ ವಿಶೇಷ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಿಗೆ ಹಣ ಬಳಕೆ ಪ್ರಮಾಣ ಪತ್ರ ನೀಡಬೇಕು. ಹಾಗೆಯೇ ೨೦೧೯-೨೦ ರಲ್ಲಿ ರೂ. ೧೦೦ ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಾಮಗಾರಿಯ ಹಣ ಬಳಕೆ ಪ್ರಮಾಣ ಪತ್ರ ಪಡೆಯುವ ನಿಟ್ಟಿನಲ್ಲಿ ಜಿ.ಪಂ. ಸಿಇಒ, ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಅವರು ತಮ್ಮ ವ್ಯಾಪ್ತಿಯಲ್ಲಿ ಮೇಲ್ವಿಚಾರಣೆ ಮಾಡಿ ಯುಸಿ ತರಿಸಿಕೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನ ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಮಾರ್ಚ್ ಅಂತ್ಯದೊಳಗೆ ಪೂರ್ಣ ಗೊಳಿಸಬೇಕು. ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳು ಸೂಕ್ತ ಕಾಲವಾಗಿದ್ದು, ಈ ವೇಳೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ತೋರಬಾರದು ಎಂದು ತಿಳಿಸಿದರು.

ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು. ಇದೇ ತಾ. ೨೫ ರಂದು ಮತದಾರರ ದಿನಾಚರಣೆ ಇದ್ದು, ತಾಲೂಕು ಮತ್ತು ಬೂತ್ ಮಟ್ಟದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ ಮಾಡಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕಳೆದ ವಾರ ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿದಿದ್ದು, ಬೆಳೆ ನಷ್ಟ ಸಂಬAಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆ ಸಂಬAಧಿಸಿದAತೆ ವೈದ್ಯಕೀಯ ಕಾಲೇಜಿನ ಅಧೀಕ್ಷಕ ಲೋಕೇಶ್, ಜಿ.ಪಂ. ಇಂಜಿನಿಯರ್ ಶ್ರೀಕಂಠಯ್ಯ, ಪಿಎಂಜಿಎಸ್‌ವೈ ಇಂಜಿನಿಯರ್ ಪ್ರಭು, ಸಣ್ಣ ನೀರಾವರಿ ಇಲಾಖೆಯ ಇಂಜನಿಯರ್ ಕಾಂತರಾಜು, ತಹಶೀಲ್ದಾರ್ ಮಹೇಶ್, ಯೋಗಾ ನಂದ, ಪೌರಾಯುಕ್ತ ರಾಮದಾಸ್, ಪ.ಪಂ. ಮುಖ್ಯಾಧಿಕಾರಿ ಶ್ರೀಧರ, ಸಜೀಲ್ ಕುಮಾರ್ ಅವರು ಹಣ ಬಳಕೆ ಪ್ರಮಾಣ ಪತ್ರ ನೀಡುವ ಸಂಬAಧ ಮಾಹಿತಿ ನೀಡಿದರು. ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್. ರೂಪ ಇತರರು ಇದ್ದರು.