ಮಡಿಕೇರಿ: ಕೆ. ನಿಡುಗಣೆ ಗ್ರಾ.ಪಂ.ನ ನೂತನ ಸದಸ್ಯರುಗಳಾದ ಜಾನ್ಸನ್ ಪಿಂಟೋ, ಪ್ರಮೀಳಾ ಸುರೇಶ್, ಅನಿತಾ ಪ್ರಮೋದ್ ಹಾಗೂ ಪುಷ್ಪಲತಾ ಪ್ರೇಮ್ ಕುಮಾರ್ ಅವರುಗಳನ್ನು ಸಿಸಿಎಂ ಆರ್.ಆರ್. ಕ್ರಿಕೆರ‍್ಸ್ ಮತ್ತು ರಿಯಲ್ ಬಾಯ್ಸ್ ಜಂಟಿ ಆಶ್ರಯದಲ್ಲಿ ಸನ್ಮಾನಿಸಲಾಯಿತು.
ಪ್ರಮುಖರಾದ ಯೋಗಾನಂದ, ಎಂ.ಕೆ. ಶಾಫಿ, ಮನು, ಮಂಜು, ಅನಿಲ್ ಮತ್ತಿತರರು ಉಪಸ್ಥಿತರಿದ್ದರು. ಸ್ಥಳೀಯ ಪ್ರಮುಖರಾದ ಎಂ.ಎ. ರಜಾಕ್ ಸ್ವಾಗತಿಸಿ, ನಿರೂಪಿಸಿದರು.ಕೂಡಿಗೆ: ಇಲ್ಲಿಗೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರುಗಳಿಗೆ ಚಿಕ್ಕಅಳುವಾರ ಗ್ರಾಮಸ್ಥರು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ತೊರೆನೂರು ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಮಾಜಿ ಅಧ್ಯಕ್ಷ ಕೆ.ಬಿ. ದೇವರಾಜು, ಮಹಾದೇವ, ಶೋಭಾ ಇವರುಗಳನ್ನು ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ಗ್ರಾಮದ ಪ್ರಮುಖರು ಮತ್ತು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರು ಹಾಜರಿದ್ದರು.ಸಿದ್ದಾಪುರ: ನೆಲ್ಲಿಹುದಿಕೇರಿಯ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಮನು ಕುಮಾರ್ ರೈ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು. ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನೆಲ್ಲಿಹುದಿಕೇರಿ ಗ್ರಾಮದ ಶಕ್ತಿ ಕೇಂದ್ರ ಉತ್ತಮ ರೀತಿಯಲ್ಲಿ ಶ್ರಮ ವಹಿಸಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಬರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮ ಪಡಬೇಕೆಂದು ಕರೆ ನೀಡಿದರು.
ನೆಲ್ಲಿಹುದಿಕೇರಿಯ ಶಕ್ತಿ ಕೇಂದ್ರದ ಅಧ್ಯಕ್ಷ ಕೆ. ಬೆಳ್ಯಪ್ಪ ಮಾತನಾಡಿ, ಶಕ್ತಿ ಕೇಂದ್ರವು ಈ ಬಾರಿಯ ಗ್ರಾ.ಪಂ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ್ದು, ಆದರೂ ಕೂಡ ನಿರೀಕ್ಷಿತ ಮಟ್ಟದಲ್ಲಿ ಸ್ಥಾನಗಳು ಲಭ್ಯವಾಗಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಶಕ್ತಿ ಕೇಂದ್ರ ಗ್ರಾಮಸ್ಥರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕರ್ತರೊಂದಿಗೆ ಸೇರಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಗ್ರಾ.ಪಂ.ಗೆ ನೂತನವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳಾದ ಪದ್ಮಾವತಿ ಸುಜಾತ, ಪದ್ಮಾವತಿ ಅವರನ್ನು ಪಕ್ಷದ ಮುಖಂಡರು ಸನ್ಮಾನಿಸಿ, ಗೌರವಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮೋಕ್ಷಿತ್, ಹಿರಿಯ ಸದಸ್ಯರುಗಳಾದ ಟಿ.ಸಿ. ರಾಮನ್ ಕುಟ್ಟಿ, ಟಿ.ಬಿ. ತಿಮ್ಮಯ್ಯ ಇನ್ನಿತರರು ಹಾಜರಿದ್ದರು.