ಬೆಂಗಳೂರು, ಜ. ೧೩: ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ನೂತನ ಸಚಿವರಾಗಿ ಇಂದು ಏಳು ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಹಲವು ಬೇಗುದಿ - ಅಸಮಾಧಾನ - ನಡುವೆಯೇ ಪ್ರಮಾಣ ವಚನ ಸ್ವೀಕಾರ ನಡೆಯಿತು.ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಸಿ.ಪಿ. ಯೋಗೇಶ್ವರ್, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ಕತ್ತಿ, ಇವರುಗಳಿಗೆ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜೂಬಾಯಿವಾಲ ಅವರು ಮುಖ್ಯಮಂತ್ರಿ ಬಿ.ಎಸ್. ಬೆಂಗಳೂರು, ಜ. ೧೩: ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ನೂತನ ಸಚಿವರಾಗಿ ಇಂದು ಏಳು ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಹಲವು ಬೇಗುದಿ - ಅಸಮಾಧಾನ - ನಡುವೆಯೇ ಪ್ರಮಾಣ ವಚನ ಸ್ವೀಕಾರ ನಡೆಯಿತು.ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಸಿ.ಪಿ. ಯೋಗೇಶ್ವರ್, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ಕತ್ತಿ, ಇವರುಗಳಿಗೆ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜೂಬಾಯಿವಾಲ ಅವರು ಮುಖ್ಯಮಂತ್ರಿ ಬಿ.ಎಸ್. ಬೆಂಗಳೂರು, ಜ. ೧೩: ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ನೂತನ ಸಚಿವರಾಗಿ ಇಂದು ಏಳು ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಹಲವು ಬೇಗುದಿ - ಅಸಮಾಧಾನ - ನಡುವೆಯೇ ಪ್ರಮಾಣ ವಚನ ಸ್ವೀಕಾರ ನಡೆಯಿತು.ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಸಿ.ಪಿ. ಯೋಗೇಶ್ವರ್, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ಕತ್ತಿ, ಇವರುಗಳಿಗೆ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜೂಬಾಯಿವಾಲ ಅವರು ಮುಖ್ಯಮಂತ್ರಿ ಬಿ.ಎಸ್. ಹಲವರು ಬಹಿರಂಗವಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಹಕಾರ ನೀಡಿದ್ದ ಎಂಟಿಬಿ ನಾಗರಾಜ್, ಯೋಗೀಶ್ವರ್, ಶಂಕರ್ ಇವರುಗಳಿಗೆ ಸಚಿವ ಸ್ಥಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಹೆಚ್. ವಿಶ್ವನಾಥ್, ಆಕಾಂಕ್ಷಿಗಳಾಗಿದ್ದ ಶಾಸಕರಾದ ಬಸವನಗೌಡ ಪಾಟೀಲ್, ಯತ್ನಾಳ್, ರೇಣುಕಾಚಾರ್ಯ ಸೇರಿ ದಂತೆ ಹಲವರು ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಯಡಿಯೂರಪ್ಪ ವಿರುದ್ಧ
ಯತ್ನಾಳ್ ಕಿಡಿ
ಬ್ಲಾö್ಯಕ್ಮೇಲ್ಗೆ ಬೆದರಿ ಮೂವರಿಗೆ ಮುಖ್ಯಮಂತ್ರಿಗಳು ಸಚಿವ ಸ್ಥಾನವನ್ನು ನೀಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಕೂಡ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದ ಅವರು, ಕೆಲವರು
(ಮೊದಲ ಪುಟದಿಂದ) ಸಿ.ಡಿ ತೋರಿಸಿ ಹೆದರಿಸಿ, ಸಚಿವ ಸ್ಥಾನ ಪಡೆದಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ. ಸಿಎಂಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು. ಸಂಕ್ರಮಣದ ಉತ್ತರಾಯಣದ ಮೂಲಕ ಯಡಿಯೂರಪ್ಪ ಅಂತ್ಯ ಆರಂಭವಾಗಿದೆ ಎಂದು ಆಕ್ರೋಶದ ನುಡಿಯಾಡಿದರು.
ವಿಶ್ವನಾಥ್ ಗರಂ: ರೇಣುಕಾಚಾರ್ಯ ಅಳಲು
ಸಂಪುಟ ವಿಸ್ತರಣೆಯಲ್ಲಿ ಯೋಗೇಶ್ವರ್ ಅವರಿಗೆ ಸ್ಥಾನ ನೀಡಿರುವುದಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೋಗೇಶ್ವರ್ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅಂತಹವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ವಿಶ್ವನಾಥ್ ಆರೋಪಿಸಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರೇಣುಕಾಚಾರ್ಯ ಕೂಡಾ ಮಾದ್ಯಮಗಳ ಎದುರು ಅಳಲು ತೋಡಿಕೊಂಡಿದ್ದು, ಸಚಿವ ಸ್ಥಾನ ಸಿಗದಿರುವುದಕ್ಕೆ ತನ್ನ ಕ್ಷೇತ್ರದ ಜನರೇ ಮುಂದೆ ಉತ್ತರ ಕೊಡಲಿದ್ದಾರೆ ಎಂದು ಹೇಳಿದರು. ಮಂತ್ರಿಮAಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ರಾಜ್ಯ ಮತ್ತು ರಾಷ್ಟçದ ನಾಯಕರುಗಳಿಗೆ ನಿಷ್ಠಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೇ? ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಿಡಿಕಾರಿದ್ದಾರೆ.
ನಾಗೇಶ್ ರಾಜೀನಾಮೆ
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಸಂಪುಟ ಸರ್ಕಸ್ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಬಳಿಕ ವಿಧಾನ ಸೌಧದಲ್ಲಿ ಮಾತನಾಡಿದ ಅವರು, ರಾಜೀನಾಮೆಗೆ ಕಾರಣ ಹೇಳಿಲ್ಲ, ಆದರೆ ಸಚಿವ ಸ್ಥಾನಕ್ಕೆ ಸಮಾನಾಂತರವಾದ ಹುದ್ದೆ ನೀಡುತ್ತಾರಂತೆ, ಸಿಎಂ ಮಾತಿಗೆ ಬೆಲೆಕೊಟ್ಟು ನಾನು ರಾಜೀನಾಮೆ ನೀಡುತ್ತಿದೇನೆ ಎಂದು ಹೇಳಿದ್ದಾರೆ. ರಾಜೀನಾಮೆ ಕೊಡುವಂತ ತಪ್ಪು ನಾನೇನು ಮಾಡಿಲ್ಲ, ನನ್ನ ವಿರುದ್ಧ ಯಾವುದೇ ದೂರುಗಳಿಲ್ಲ ಎಂದಿದ್ದಾರೆ.