ಕೂಡಿಗೆ, ಜ. ೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಕೂಡಿಗೆ ಗ್ರಾಮದ ಹತ್ತಿರವಿರುವ ಕಾವೇರಿ ಹಾರಂಗಿ ನದಿಗಳು ಸಂಗಮವಾಗುವ ಸ್ಥಳಕ್ಕೆ ತೆರಳುವ ದಾರಿಯ ಸರ್ವೆ ಕಾರ್ಯವನ್ನು ಕಂದಾಯ ಇಲಾಖೆ ವತಿಯಿಂದ ನಡೆಸುವಂತೆ ಈ ವ್ಯಾಪ್ತಿಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದಕ್ಕೆ ಸಂಬAಧಿಸಿದAತೆ ದಂಡಿನಮ್ಮ - ಬಸವೇಶ್ವರ ದೇವಾಲಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಗ್ರಾಮಸ್ಥರು ಖುದ್ದಾಗಿ ಮನವಿಯನ್ನು ಸಲ್ಲಿಸಿದ್ದಾರೆ. ಈ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಅವರ ಅನುದಾನದಲ್ಲಿ ರೂ. ೫ ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಯನ್ನು ಮಾಡುವ ಭರವಸೆಯನ್ನು ನೀಡಿ ಕ್ರಿಯಾ ಯೋಜನೆಯನ್ನು ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆದರೆ ಇದುವರೆಗೂ ಯಾವುದೇ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ಸಂಬAಧಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಇಲಾಖೆಯ ಮೂಲಕ ಸರ್ವೆ ಕಾರ್ಯ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.