*ಗೋಣಿಕೊಪ್ಪ, ಜ. ೧೩: ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸೀಗೆತೋಡುವಿನ ಸೇತುವೆ ಬಳಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಸುತ್ತಲಿನ ವಾತಾವರಣ ಕಲುಷಿತಗೊಂಡು ರೋಗ ಹರಡುವ ಭೀತಿ ಎದುರಾಗಿದೆ. ಹೀಗಾಗಿ ಈ ಭಾಗದಲ್ಲಿ ವಾಸಿಸಲು ಅಸಾಧ್ಯವಾಗಿದೆ ಎಂದು ನಿವೃತ್ತ ಶಿಕ್ಷಕಿ ವಿ.ಕೆ. ಕಮಲ ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಅಪರಿಚಿತ ವ್ಯಕ್ತಿಗಳು ರಾತ್ರಿ ಸಮಯದಲ್ಲಿ ತ್ಯಾಜ್ಯಗಳನ್ನು ತಂದು ಸೇತುವೆಯ ಎಡಭಾಗದ ದಂಡೆಯಲ್ಲಿ ಸುರಿದು ಹೋಗುತ್ತಿದ್ದಾರೆ. ತ್ಯಾಜ್ಯಗಳನ್ನು ಬೀದಿ ನಾಯಿಗಳು ಎಳೆದಾಡಿ ಸುತ್ತಲಿನ ಪರಿಸರವನ್ನು ಅಸಹ್ಯಕರವಾಗುವಂತೆ ಮಾಡುತ್ತಿದೆ. ಇದರಿಂದಾಗಿ ಇಲ್ಲಿ ಹೋಗುತ್ತಿದ್ದಾರೆ. ತ್ಯಾಜ್ಯಗಳನ್ನು ಬೀದಿ ನಾಯಿಗಳು ಎಳೆದಾಡಿ ಸುತ್ತಲಿನ ಪರಿಸರವನ್ನು ಅಸಹ್ಯಕರವಾಗುವಂತೆ ಮಾಡುತ್ತಿದೆ. ಇದರಿಂದಾಗಿ ಇಲ್ಲಿ ಮಾರಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಂಬAಧಪಟ್ಟ ಪಂಚಾಯಿತಿ ಈ ಸ್ಥಳದಲ್ಲಿರುವ ಕಸವನ್ನು ತೆರವುಗೊಳಿಸುವುದರೊಂದಿಗೆ ಈ ಭಾಗದಲ್ಲಿ ಸಿಸಿ ಕ್ಯಾಮರವನ್ನು ಅಳವಡಿಸಿ ಈ ಕೃತ್ಯ ಎಸಗುವವರ ಮೇಲೆ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಸೇತುವೆಯ ಬದಿಯಲ್ಲಿ ಗಿಡಗಂಟಿಗಳು ಬೆಳೆದು ನಿಂತು ವಾಹನ ಸಂಚಾರಕ್ಕೂ ಅಡಚಣೆಯಾಗುತ್ತಿದೆ. ಈ ಬಗ್ಗೆಯು ಪಂಚಾಯಿತಿ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.