ಹೆಚ್.ಕೆ. ಪಾಂಡು

ಸುAಟಿಕೊಪ್ಪ, ಜ. ೧೩: ವಿದ್ಯಾರ್ಥಿಗಳು ಬಾಲಾವಸ್ಥೆಯಲ್ಲಿಯೇ ಕಲಿಕೆಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮೂಲಕ ಮುಂದಿನ ಜೀವನದಲ್ಲಿ ಕಠಿಣ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸನ್ನದ್ಧರಾಗಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಹೇಳಿದರು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿ.ಎಸ್.ಇ. ಆರ್.ಟಿ.), ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ಸುಂಟಿಕೊಪ್ಪ ಸಂತ ಮೇರಿ ಆಂಗ್ಲಭಾಷಾ ಪ್ರೌಢಶಾಲೆಯಲ್ಲಿ ಕೋವಿಡ್-೧೯ರ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಕಾಪಾಡಿಕೊಂಡು ತಾ. ೨೫ ರಂದು ಪ್ರೌಢಶಾಲಾ ಮಕ್ಕಳಿಗೆ ನಡೆಯಲಿರುವ ಎನ್.ಟಿ.ಎಸ್.ಇ.( ೧೦ ನೇ ತರಗತಿ) ಮತ್ತು ಎನ್.ಎಂ. ಎಂ.ಎಸ್. (೮ನೇ ತರಗತಿ) ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶಿ ಶಿಕ್ಷಕರಿಂದ ಏರ್ಪಡಿಸಿದ್ದ ಮಾರ್ಗ ದರ್ಶನ ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶಿಷ್ಯವೇತನ ಕೊಡಲ್ಪಡುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಎನ್.ಟಿ.ಎಸ್.ಇ. (ರಾಷ್ಟಿçÃಯ ಪ್ರತಿಭಾನ್ವೇಷಣೆ ಪರೀಕ್ಷೆ) ಹಾಗೂ ಎನ್.ಎಂ.ಎA.ಎಸ್. (ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಪರೀಕ್ಷೆ) ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಎದುರಿಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರಿಯಾಗಲಿವೆ ಎಂದರು.

ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಕ್ಲಸ್ಟರ್ ಮಟ್ಟದಲ್ಲಿ ತಾಲೂಕಿನಲ್ಲಿ ನಾಲ್ಕು ಕಡೆಗಳಲ್ಲಿ ವಿದ್ಯಾರ್ಥಿಗಳ ತಂಡಗಳನ್ನು ಆಯೋಜಿಸಿ ನುರಿತ ಶಿಕ್ಷಕರಿಂದ ಸ್ಪರ್ಧಾ ಕಲಿ, ಜಿ-ಮ್ಯಾಟ್, ಸ್ಯಾಟ್ ಪರೀಕ್ಷೆಗಳ ಕುರಿತು ಮಾರ್ಗದರ್ಶನ ದರ್ಶನ ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶಿಷ್ಯವೇತನ ಕೊಡಲ್ಪಡುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಎನ್.ಟಿ.ಎಸ್.ಇ. (ರಾಷ್ಟಿçÃಯ ಪ್ರತಿಭಾನ್ವೇಷಣೆ ಪರೀಕ್ಷೆ) ಹಾಗೂ ಎನ್.ಎಂ.ಎA.ಎಸ್. (ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಪರೀಕ್ಷೆ) ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಎದುರಿಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರಿಯಾಗಲಿವೆ ಎಂದರು.

ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಕ್ಲಸ್ಟರ್ ಮಟ್ಟದಲ್ಲಿ ತಾಲೂಕಿನಲ್ಲಿ ನಾಲ್ಕು ಕಡೆಗಳಲ್ಲಿ ವಿದ್ಯಾರ್ಥಿಗಳ ತಂಡಗಳನ್ನು ಆಯೋಜಿಸಿ ನುರಿತ ಶಿಕ್ಷಕರಿಂದ ಸ್ಪರ್ಧಾ ಕಲಿ, ಜಿ-ಮ್ಯಾಟ್, ಸ್ಯಾಟ್ ಪರೀಕ್ಷೆಗಳ ಕುರಿತು ಮಾರ್ಗದರ್ಶನ ರೆ.ಫಾ. ಅರುಳ್ ಸೆಲ್ವಕುಮಾರ್ ಮಾತನಾಡಿ, ತರಬೇತಿಗಳು ವಿದ್ಯಾರ್ಥಿಗಳಲ್ಲಿ ಭವಿಷ್ಯದಲ್ಲಿ ಉತ್ತಮ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸೂಕ್ತ ತಳಹದಿ ನೀಡುತ್ತವೆ ಎಂದರು.

ತಾಲೂಕು ಪರೀಕ್ಷಾ ನೋಡಲ್ ಅಧಿಕಾರಿ ಶಿಕ್ಷಣ ಸಂಯೋಜಕ ಕೆ.ಬಿ. ರಾಧಾಕೃಷ್ಣ, ಈ ಪರೀಕ್ಷೆಗಳ ಉದ್ದೇಶಗಳ ಬಗ್ಗೆ ತಿಳಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವ ಎಸ್. ಪಲ್ಲೇದ್, ಸಂತಮೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆರ್. ಸೆಲ್ವರಾಜ್, ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಶಿಕ್ಷಣ ಸಂಯೋಜಕ ಎಸ್.ಆರ್. ಶಿವಲಿಂಗ, ಸಿ.ಆರ್.ಪಿ.ಗಳಾದ ಎಂ.ಸಿ. ಸೀಮಾ, ಬಿ.ಎನ್. ವಸಂತಕುಮಾರ್ ಇತರರು ಇದ್ದರು.

ಎರಡು ದಿನಗಳ ಕಾಲ ನಡೆದ ತರಬೇತಿಯಲ್ಲಿ ಸಂಪನ್ಮೂಲ ಶಿಕ್ಷಕರಾದ ಹ್ಯೂಬರ್ಟ್ ಡಯಾಸ್, ಬಿ.ಬಿ. ದಿನೇಶ್, ತಿಪ್ಪೇಸ್ವಾಮಿ, ಪ್ರವೀಣ್ ಕಾಮತ್, ಎಸ್.ಎಂ. ಇಬ್ರಾಹಿಂ, ಆರ್. ಸಮತಾ, ವೈ.ಸಿ. ಪ್ರವೀಣ್ ಕುಮಾರ್, ರಜಿನಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.