ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲೆಯ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹುಟ್ಟು ಹಬ್ಬದ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.
೧೩ ವರ್ಷದಿಂದ ೧೮ ವರ್ಷದವರೆಗಿನ ವಿದ್ಯಾರ್ಥಿಗಳಿಗೆ ‘‘ಶಿಸ್ತು ಪಾಲನೆಯಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ’’ ವಿಚಾರದ ಬಗ್ಗೆ, ೧೯ ವರ್ಷದಿಂದ ೨೫ ವರ್ಷದವರೆಗಿನ ವಿದ್ಯಾರ್ಥಿಗಳಿಗೆ ‘‘ಸಾಧನೆಯ ಹಾದಿಯಲ್ಲಿ ಇತ್ತು ಸತತ ಶ್ರಮ (ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಬಾಳ ಹಾದಿಯನ್ನಾಧರಿಸಿ)’’ ಎಂಬ ವಿಚಾರದ ಕುರಿತು ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜೀವನ ಮೌಲ್ಯಗಳು ಎಂಬ ವಿಚಾರದ ಬಗ್ಗೆ ಸಾರ್ವಜನಿಕರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರತಿ ವಿಭಾಗದಲ್ಲಿಯೂ ಮೂರು ಬಹುಮಾನ ನೀಡಲಾಗುತ್ತದೆ.