ಕೂಡಿಗೆ, ಜ. ೧೩: ಸೋಮವಾರಪೇಟೆ ತಾಲೂಕು ಕೃಷಿ ಇಲಾಖೆ ಕುಶಾಲನಗರ ರೈತ ಸಂಪರ್ಕ ಕೇಂದ್ರದ ಇವರ ವತಿಯಿಂದ ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ್ದ ರೈತರುಗಳಿಗೆ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅರುಣ್ ಅವರು ಪೈಪ್‌ಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, ಕೃಷಿ ಇಲಾಖೆಯ ನಿಯಮನುಸಾರವಾಗಿ ಕುಶಾಲನಗರ ಹೋಬಳಿ ವ್ಯಾಪ್ತಿಯ ತೊರೆನೂರು, ಶಿರಂಗಾಲ, ಹೆಬ್ಬಾಲೆ, ಕೂಡಿಗೆ, ಅಳುವಾರ ಗ್ರಾಮಗಳ ರೈತರುಗಳಿಗೆ ೨೦೧೯-೨೦ನೇ ಸಾಲಿನಲ್ಲಿ ೯೦ ರೈತರುಗಳಿಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿಗಳಾದ ಸುನಿಲ್, ಶಾರದಾ ಸೇರಿದಂತೆ ಐದು ಗ್ರಾಮಗಳ ರೈತರು ಹಾಜರಿದ್ದರು.