ಮಡಿಕೇರಿ, ಜ. ೧೩: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ೧೨೨ನೇ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ತಾ. ೧೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ವ್ಯಕ್ತಿತ್ವ ಮತ್ತು ರಕ್ಷಣಾ ಸೇವೆಯ ಪ್ರಭುತ್ವ ಬಗ್ಗೆ ಪ್ರಬಂಧ ಮತ್ತು ಚಿತ್ರಕಲೆ (ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರ ಭಾವಚಿತ್ರ) ಸ್ಪರ್ಧೆಗಳನ್ನು ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (೮ ರಿಂದ ೧೦ನೇ ತರಗತಿಯವರೆಗೆ) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.