ಮಡಿಕೇರಿ, ಜ.೧೩: ಕೇಂದ್ರ ಸರಕಾರ ಜಾರಿಗೆ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಂ.ಸಿ. ಹಾಗೂ ವಿದ್ಯುತ್ ತಿದ್ದುಪಡಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಈ ಸಂಬAಧ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಜ್ಯವ್ಯಾಪಿ ಅಭಿಯಾನ ನಡೆಸಲು ನಿರ್ಧರಿಸಿದೆ ಎಂದು ಪಾರ್ಟಿಯ ಜಿಲ್ಲಾಧ್ಯಕ್ಷ ಕೆ.ಟಿ.ಬಶೀರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂವಾದ, ಪ್ರತಿಭಟನಾ ಮೆರವಣಿಗೆ, ಧರಣಿ, ವಿಚಾರ ಗೋಷ್ಠಿಗಳ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲಾಗುವದೆಂದು ಅವರು ತಿಳಿಸಿದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಸತೀಶ್, ನೆಲ್ಯಹುದಿಕೇರಿ ಗ್ರಾ.ಪಂ. ಸದಸ್ಯ ಕೆ.ಕೆ. ಅಶೋಕ್, ಕೆ.ಎಂ. ಆಸಿಫಾ ನಿಝಾಂ, ರವೂಫ್ ಕಟ್ಟೆಮಾಡು ಇದ್ದರು.