ಕುಶಾಲನಗರ, ಜ. ೧೫: ನಿಯಂತ್ರಣ ತಪ್ಪಿದ ಕಾರೊಂದು ಮೂರು ವಾಹನಗಳಿಗೆ ಡಿಕ್ಕಿ ಪಡಿಸಿ ಹಾನಿಯುಂಟು ಮಾಡಿದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಮೈಸೂರು ರಸ್ತೆಯ ಹೆದ್ದಾರಿಯಲ್ಲಿ ಕುಶಾಲನಗರ ಪಟ್ಟಣದ ಕಡೆಯಿಂದ ವೇಗವಾಗಿ ಬಂದ ಮಾರುತಿ ಸ್ವಿಪ್ಟ್ ಡಿಸೈರ್ ಟ್ಯಾಕ್ಸಿ
(ಕೆಎ.೪೫.ಎ.೨೨೧೬) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ವಿಫ್ಟ್ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಸೇರಿದಂತೆ ಕಾರಿನ ಹಿಂಭಾಗದಲ್ಲಿ ನಿಲ್ಲಿಸಿದ್ದ ಒಂದು ಸ್ಕೂಟಿ, ಓಮಿನಿ ಕಾರು ಮತ್ತು ಬೈಕ್ ಕೂಡ ತೀವ್ರವಾಗಿ ಜಖಂಗೊAಡಿದೆ. ಚಿಕ್ಕನೇರಳೆ ಗ್ರಾಮದ ವೈ ಕುಮಾರ್ ಎಂಬಾತ ಚಾಲಿಸುತ್ತಿದ್ದ ಟ್ಯಾಕ್ಸಿಯಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಕಾರಿನಲ್ಲಿದ್ದ ಓರ್ವ ವ್ಯಕ್ತಿಗೆ ತಲೆಗೆ ಪೆಟ್ಟಾಗಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಲ್ಲಿ ಯಾರೂ ಇಲ್ಲದ ಕಾರಣ ವಾಹನಗಳಿಗೆ ಅಲ್ಪಸ್ವಲ್ಪ ಜಖಂ ಹೊರತುಪಡಿಸಿ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.