ಸೋಮವಾರಪೇಟೆ, ಜ. ೧೫ : ಸಮೀಪದ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ೬೨ನೇ ಮಹಾರಥೋತ್ಸವ ತಾ. ೧೬ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನೆರವೇರಲಿದೆ.
ಇಂದು ಪೂರ್ವಾಹ್ನ ೧೧ ಗಂಟೆಗೆ ಮಹಾ ರಥೋತ್ಸವ ಜರುಗಲಿದೆ. ರಾತ್ರಿ ೭ ಗಂಟೆಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ. ವೇದಮೂರ್ತಿ ಶಿಬರೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಲಿವೆ ಎಂದು ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಲೋಕೇಶ್ ತಿಳಿಸಿದ್ದಾರೆ.
ತಾ. ೧೭ರಂದು(ನಾಳೆ) ಮಹಾ ಸಂಪ್ರೋಕ್ಷಣೆ, ವಿವಿಧ ಅರ್ಚನೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾಮಂಗಳಾರತಿ, ಮಂಗಳ ಪ್ರಾರ್ಥನೆ ನಡೆಯಲಿದೆ ಎಂದು ಲೋಕೇಶ್ ಮಾಹಿತಿ ನೀಡಿದ್ದಾರೆ.