ಭಕ್ತರ ಸಮ್ಮುಖದಲ್ಲಿ ಮೇಳೈಸಿದ ಶಾಂತಳ್ಳಿ ಕುಮಾರಲಿಂಗೇಶ್ವರ ರಥೋತ್ಸವಸೋಮವಾರಪೇಟೆ, ಜ. ೧೬: ತಾಲೂಕಿನ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ, ಚೋಳರ ಕಾಲದ ಇತಿಹಾಸ ಹೊಂದಿರುವ ಶ್ರೀಕುಮಾರಲಿಂಗೇಶ್ವರ ಸ್ವಾಮಿ ದೇವರ ೬೨ನೇ ವರ್ಷದ ಮಹಾರಥೋತ್ಸವ ಭಕ್ತಾದಿಗಳ ಸಮ್ಮುಖದಲ್ಲಿ, ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಇಂದು ನೆರವೇರಿತು. ಅನಾದಿಕಾಲದಿಂದಲೂ ನಡೆದು ಬಂದ ಪದ್ಧತಿಯ ಮೇರೆ ಕೂತಿ ನಾಡು, ತೋಳುನಾಡು, ಪುಷ್ಪಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ, ಹೊರ ಜಿಲ್ಲೆಯ ನೂರಾರು ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ರಥಬೀದಿಯಲ್ಲಿ ಅಲಂಕೃತ ರಥದಲ್ಲಿ ಶ್ರೀ ಕುಮಾರಲಿಂಗೇಶ್ವರ ದೇವರ ಮೆರವಣಿಗೆ ನಡೆಸಲಾಯಿತು. ನೂರಾರು ಮಂದಿ ಭಕ್ತಾದಿಗಳು ರಥವನ್ನೆಳೆದರು. ಕಳೆದ ತಾ. ೧೩ರ ಬೆಳ್ಳಿ ಬಂಗಾರ ದಿನದಂದು ಪ್ರಾರ್ಥನಾ ಪೂಜೆಯೊಂದಿಗೆ ವಿದ್ಯುಕ್ತವಾಗಿ ಚಾಲನೆಗೊಂಡಿರುವ ಪ್ರಸಕ್ತ ವರ್ಷದ ಜಾತ್ರೆಗೆ ತಾ. ೧೭ ರಂದು (ಇಂದು) ತೆರೆಬೀಳಲಿದೆ. ಸುಮಾರು ೮೦೦ಕ್ಕೂ ಅಧಿಕ ವರ್ಷಗಳ ಹಿಂದಿನ ಇತಿಹಾಸ ಹೊಂದಿರುವ ಶ್ರೀಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ೬೨ನೇ ವರ್ಷದ ಮಹಾ ರಥೋತ್ಸವಕ್ಕೆ ಕೊಡಗು ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರಲ್ಲದೇ, ವಿವಿಧ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಕರುವಿನ ಹಬ್ಬ, ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ಶಾಂತಮಲ್ಲಿಕಾರ್ಜುನ ದೇವಾಲಯದಲ್ಲಿ
(ಮೊದಲ ಪುಟದಿಂದ) ದೀಪೋತ್ಸವ, ಅರಸುಬಲ ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದ್ದು, ಇಂದು ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿAದ ನೆರವೇರಿತು.
ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ದೇವಾಲಯದ ಪ್ರಧಾನ ಅರ್ಚಕ ರಮೇಶ್ ಹೆಗಡೆ ನೇತೃತ್ವದ ತಂಡದವರಿAದ ಬೆಳಗ್ಗಿನಿಂದಲೇ ಪೂಜಾ ವಿಧಿ ವಿಧಾನಗಳು ನಡೆದವು. ರಥೋತ್ಸವ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ. ಲೋಕೇಶ್, ಉಪಾಧ್ಯಕ್ಷ ಜಿ.ಡಿ. ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಸುಂದರ್, ಸಹ ಕಾರ್ಯದರ್ಶಿ ಎಸ್.ಆರ್. ಉತ್ತಯ್ಯ, ಖಜಾಂಚಿ ಕೆ.ಕೆ. ಮುತ್ತಣ್ಣ, ಗ್ರಾಮ ಸಮಿತಿ ಅಧ್ಯಕ್ಷ ಮಧುಕುಮಾರ್, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಪ್ರಮುಖರುಗಳಾದ ಹರಪಳ್ಳಿ ರವೀಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಂಜೆ ದೇವಾಲಯದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ತಾ. ೧೭ ರಂದು (ಇಂದು) ಮಹಾ ಸಂಪ್ರೋಕ್ಷಣೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾಮಂಗಳಾರತಿ ನಂತರ ಮಂಗಳ (ಮೊದಲ ಪುಟದಿಂದ) ದೀಪೋತ್ಸವ, ಅರಸುಬಲ ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದ್ದು, ಇಂದು ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿAದ ನೆರವೇರಿತು.
ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ದೇವಾಲಯದ ಪ್ರಧಾನ ಅರ್ಚಕ ರಮೇಶ್ ಹೆಗಡೆ ನೇತೃತ್ವದ ತಂಡದವರಿAದ ಬೆಳಗ್ಗಿನಿಂದಲೇ ಪೂಜಾ ವಿಧಿ ವಿಧಾನಗಳು ನಡೆದವು. ರಥೋತ್ಸವ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ. ಲೋಕೇಶ್, ಉಪಾಧ್ಯಕ್ಷ ಜಿ.ಡಿ. ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಸುಂದರ್, ಸಹ ಕಾರ್ಯದರ್ಶಿ ಎಸ್.ಆರ್. ಉತ್ತಯ್ಯ, ಖಜಾಂಚಿ ಕೆ.ಕೆ. ಮುತ್ತಣ್ಣ, ಗ್ರಾಮ ಸಮಿತಿ ಅಧ್ಯಕ್ಷ ಮಧುಕುಮಾರ್, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಪ್ರಮುಖರುಗಳಾದ ಹರಪಳ್ಳಿ ರವೀಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಂಜೆ ದೇವಾಲಯದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.
ತಾ. ೧೭ ರಂದು (ಇಂದು) ಮಹಾ ಸಂಪ್ರೋಕ್ಷಣೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾಮಂಗಳಾರತಿ ನಂತರ ಮಂಗಳ ಪ್ರಾರ್ಥನೆ ನಡೆಯುವ ಮೂಲಕ ಪ್ರಸಕ್ತ ವರ್ಷದ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ತೆರೆಬೀಳಲಿದೆ.
ಜಾತ್ರೋತ್ಸವದ ಅಂಗವಾಗಿ ತಾಲೂಕಿನ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ರೈತರು ಬೆಳೆದ ಬೆಳೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕೊರೊನಾ ಹಿನ್ನೆಲೆ ಈ ಬಾರಿಯ ಜಾತ್ರೋತ್ಸವದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಕ್ರೀಡಾಕೂಟವನ್ನು ರದ್ದುಪಡಿಸಲಾಗಿತ್ತು.