ಮಡಿಕೇರಿ, ಜ. ೧೬: ಜಿಲ್ಲೆಯಲ್ಲಿ ತಾ. ೧೬ ರಂದು ಹೊಸದಾಗಿ ೭ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೪,೭೧೭ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೨೭ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೭೬೯ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೭೭ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೧೧ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೬೬ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೪೧ ನಿಯಂತ್ರಿತ ವಲಯಗಳಿವೆ.