*ಗೋಣಿಕೊಪ್ಪಲು, ಜ. ೧೬: ಅರುವತ್ತೊಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈಸೂರಮ್ಮ ನಗರದಲ್ಲಿನ ಚರಂಡಿಗಳು ತ್ಯಾಜ್ಯಗಳಿಂದ ತುಂಬಿ ಕ್ರಿಮಿಕೀಟಗಳ ವಾಸಸ್ಥಾನವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ ಎಂದು ಅಲ್ಲಿಯ ನಿವಾಸಿಗಳು ಆರೋಪಿಸಿದ್ದಾರೆ.

ಚರಂಡಿಗಳಲ್ಲಿ ನೀರು ನಿಂತು ತ್ಯಾಜ್ಯಗಳು ಕೊಳೆತ ಸ್ಥಿತಿಯಲ್ಲಿದೆ. ಹೀಗಾಗಿ ಚರಂಡಿಗಳಲ್ಲಿ ಸೊಳ್ಳೆ, ನೊಣಗಳು ತಮ್ಮ ಜೀವಿತ ಕ್ರಮವನ್ನು ಅನುಸರಿಸುತ್ತಿದೆ. ಈ ಕಾರಣದಿಂದ ಇಲ್ಲಿ ರೋಗ ರುಜಿನ ಹರಡುವ ಭೀತಿ ಎದುರಾಗಿದೆ ಎಂದು ಆರೋಪಿಸಿದ್ದಾರೆ. ತಕ್ಷಣವೇ ಚರಂಡಿಗಳ ಶುಚಿತ್ವಕ್ಕೆ ಪಂಚಾಯಿತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಚರಂಡಿ ಶುಚಿಗೊಳಿಸುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ. ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುವುದಾಗಿ ಇಲ್ಲಿನ ನಿವಾಸಿಗಳು ಎಚ್ಚರಿಸಿದ್ದಾರೆ.