ಮಡಿಕೇರಿ, ಜ. ೧೬ : ನಗರದ ಸರ್ಕಾರಿ ಆಸ್ಪತ್ರೆಯ ಸುಸಜ್ಜಿತ ಕಟ್ಟಡ ಕಾಮಗಾರಿಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಪರಿಶೀಲಿಸಿದರು.

ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಕಟ್ಟಡ ಕಾಮಗಾರಿ ಗುತ್ತಿಗೆದಾರರಿಗೆ ಸೂಚಿಸಿದ ಶಾಸಕ ಅಪ್ಪಚ್ಚು ರಂಜನ್, ಹೆಚ್ಚುವರಿ ಜಾಗದ ಕೋರಿಕೆ ಹಿನ್ನೆಲೆಯಲ್ಲಿ ಮಂಗಳೂರು ರಸ್ತೆಯಲ್ಲಿನ ಸರ್ಕಾರಿ ಐಬಿ ಹಾಗೂ ಕಟ್ಟಡ ನಿರ್ಮಾಣವಾಗುವ ಸ್ಥಳದ ವ್ಯಾಪ್ತಿಯಲ್ಲಿನ ಖಾಸಗಿ ಜಮೀನನ್ನು ಸೂಕ್ತ ರೀತಿಯಲ್ಲಿ ವಶಕ್ಕೆ ಪಡೆಯುವ ನಿಟ್ಟಿನಲ್ಲಿಯೂ ಪರಿಶೀಲಿಸುವಂತೆ ಸಲಹೆ ನೀಡಿದರು.

ಈ ನಿಟ್ಟಿನಲ್ಲಿ ಐಬಿ ಜಾಗ ಪಡೆಯಲು ಪತ್ರ ವ್ಯವಹಾರ ನಡೆಸಲು ಡೀನ್ ಅವರಿಗೆ ಹಾಗೂ ಆಸ್ಪತ್ರೆ ನಿರ್ಮಾಣವಾಗುತ್ತಿರುವ ವ್ಯಾಪ್ತಿಯಲ್ಲಿನ ಖಾಸಗಿ ಜಾಗ ಅಗತ್ಯವಿದ್ದಲ್ಲಿ ಖರೀದಿ ಬಗ್ಗೆ ಮಾತುಕತೆ ನಡೆಸುವಂತೆ ರಮೇಶ್ ಹೊಳ್ಳ ಅವರಿಗೆ ಶಾಸಕರು ಸಲಹೆ ನೀಡಿದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ರಮೇಶ್ ಹೊಳ್ಳ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಕಾರ್ಯಪ್ಪ ಇತರರು ಇದ್ದರು.