ಗೋಣಿಕೊಪ್ಪಲು, ಜ. ೧೬: ಕಾವೇರಿ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ಕಾಲೇಜಿನ ಅವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಸೇನಾ ದಿನ ಆಚರಿಸಲಾಯಿತು.
ಈ ಸಂದರ್ಭ ಕಾವೇರಿ ಪದವಿ ಕಾಲೇಜು ಪ್ರಭಾರ ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ, ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಂ.ಎಸ್. ಭಾರತಿ, ಎನ್.ಸಿ.ಸಿ. ಬೆಟಾಲಿಯನ್ನ ತರಬೇತುದಾರರಾದ ರಾಧಾಕೃಷ್ಣ ಬಹದ್ದೂರ್ ತಾಪ, ಅಮ್ರೀತ್ ತಾಪ, ಎನ್ಸಿಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಎಂ.ಆರ್. ಅಕ್ರಂ, ಲೆಫ್ಟಿನೆಂಟ್ ಐ.ಡಿ. ಲೇಪಾಕ್ಷಿ ಹಾಗೂ ಎನ್ಸಿಸಿ ಕೆಡೆಟ್ಗಳು ಹಾಜರಿದ್ದರು.