ಮಡಿಕೇರಿ, ಜ. ೧೭: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ರುವ ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ, ಮುಂದಿನ ದಿನಗಳಲ್ಲಿ ಕೊಡಗಿನ ಶಾಸಕರಿಗೂ ಸಚಿವ ಸ್ಥಾನ ನೀಡುವಂತಾಗಲಿ ಎಂದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯದಿಂದ ಸತತ ಆರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಎಸ್. ಅಂಗಾರರವರು ರಾಜಕೀಯವಾಗಿ ಅಧಿಕಾರ ಪಡೆಯದೆ ತುಳಿತಕ್ಕೊಳಗಾದ ಸಮಾಜದ ಪರವಾಗಿ ತಮ್ಮದೇ ಛಾಪು ಮೂಡಿಸಿದ್ದರು. ರಾಜ್ಯದ ಮಡಿಕೇರಿ, ಜ. ೧೭: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ರುವ ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ, ಮುಂದಿನ ದಿನಗಳಲ್ಲಿ ಕೊಡಗಿನ ಶಾಸಕರಿಗೂ ಸಚಿವ ಸ್ಥಾನ ನೀಡುವಂತಾಗಲಿ ಎಂದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯದಿಂದ ಸತತ ಆರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಎಸ್. ಅಂಗಾರರವರು ರಾಜಕೀಯವಾಗಿ ಅಧಿಕಾರ ಪಡೆಯದೆ ತುಳಿತಕ್ಕೊಳಗಾದ ಸಮಾಜದ ಪರವಾಗಿ ತಮ್ಮದೇ ಛಾಪು ಮೂಡಿಸಿದ್ದರು. ರಾಜ್ಯದ ಮನವಿ ಮಾಡಿದರು. ಸಮಾಜದ ಗೌರವಧ್ಯಕ್ಷ ಹಾಗೂ ಅಕಾಡೆಮಿ ಸದಸ್ಯ ಬಿ.ಎಂ.ರವಿ ಮಾತನಾಡಿ, ಸಮಾಜ ಬಾಂಧವರು ರಾಜಕೀಯವಾಗಿ ಮುಂದೆ ಬರಬೇಕು. ಈ ಬಾರಿಯ ಗ್ರಾ.ಪಂ ಚುನಾವಣೆಯಲ್ಲಿ ಸಮಾಜದ ೭೨ ಅಭ್ಯರ್ಥಿಗಳು ಸ್ಪರ್ಧಿಸಿ ೩೨ ಅಭ್ಯರ್ಥಿಗಳು ಗೆಲುವನ್ನು ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮುದಾಯಕ್ಕೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ ಯಾಗುತ್ತಿತ್ತು ಎಂದ ಅವರು, ಮುಂದಿನ ದಿನಗಳಲ್ಲಿ ಎಸ್. ಅಂಗಾರ ಹಾಗೂ ಈ ಬಾರಿಯ ಗ್ರಾ.ಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸದಸ್ಯರಿಗೆ ಮೊಗೇರ ಸೇವಾ ಸಮಾಜದಿಂದ ಗೌರವ ಕಾರ್ಯ ಕ್ರಮವನ್ನು ಹಮ್ಮಿ ಕೊಳ್ಳುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಸಮಾಜದ ಸ್ಥಾಪಕಾಧ್ಯಕ್ಷ ಸದಾನಂದ ಮಾಸ್ಟರ್, ಜಿಲ್ಲಾ ಸಮಿತಿ ಸದಸ್ಯ ಪಿ.ಬಿ. ಮಂಜು, ಮಡಿಕೇರಿ ತಾಲೂಕು ಅಧ್ಯಕ್ಷ ಬಿ.ಬಿ. ಸುರೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಿ.ಎಂ. ದಾಮೋದರ್ ಉಪಸ್ಥಿತರಿದ್ದರು.