ಮಡಿಕೇರಿ, ಜ. ೧೭: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ೨೦೨೦-೨೧ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಲ್ಲಿ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಅದರಲ್ಲೂ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಇಬ್ಬರು ಮಹಿಳಾ ಅಭ್ಯರ್ಥಿಗಳಿಗೆ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
೨೦೨೦-೨೧ನೇ ಸಾಲಿನಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ಮಾಹೆಯಾನ ೧೫ ಸಾವಿರ ರೂ. ಗಳ ಸ್ಟೆöÊಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ೨ ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ತಾ. ೨೦ ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಸ್ಟುವರ್ಟ್ ಹಿಲ್ಸ್ ರಸ್ತೆ, ಮಡಿಕೇರಿ ಇಲ್ಲಿ ಪಡೆಯಬಹುದಾಗಿದೆ.