ಸೋಮವಾರಪೇಟೆ, ಜ. ೧೭: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ನಗರೋತ್ಥಾನ ಯೋಜನೆ ಯಡಿ ಕೈಗೊಳ್ಳಲಾಗಿರುವ ರೂ. ೨೦ ಲಕ್ಷ ವೆಚ್ಚದ ರಸ್ತೆಗಳನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೇಳೂರು ಮುಖ್ಯರಸ್ತೆಯಿಂದ ಈಶ್ವರ ಮನೆವರೆಗೆ ರೂ. ೮ ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿ ರುವ ಕಾಂಕ್ರಿಟ್ ರಸ್ತೆ ಹಾಗೂ ರೂ. ೧೨ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಬೇಳೂರು ರಸ್ತೆಯ ಅಂಬೇಡ್ಕರ್ ಪ್ರತಿಮೆಯಿಂದ ಕಟ್ಟೆಬಸವೇಶ್ವರ ದೇವಾಲಯ ಸಮೀಪದ ಆನಂದ್ ಮನೆವರೆಗಿನ ಡಾಂಬರು ರಸ್ತೆಯನ್ನು ಶಾಸಕರು ಉದ್ಘಾಟಿಸಿದರು.
ಈ ಸಂದರ್ಭ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಸದಸ್ಯರಾದ ಪಿ.ಕೆ. ಚಂದ್ರು, ಬಿ.ಆರ್. ಮಹೇಶ್, ಜೀವನ್, ಶುಭಾಕರ್, ನಾಮ ನಿರ್ದೇಶನ ಸದಸ್ಯರಾದ ಸೋಮೇಶ್, ಎಸ್. ಮಹೇಶ್, ಶರತ್‌ಚಂದ್ರ, ಪ.ಪಂ. ಮಾಜಿ ಅಧ್ಯಕ್ಷರಾದ ಸುಮಾ ಸುದೀಪ್, ಲೀಲಾ ನಿರ್ವಾಣಿ, ಬಿಜೆಪಿ ತಾಲೂಕು ಅಧ್ಯಕ್ಷ ಮನುಕುಮಾರ್ ರೈ ಸೇರಿದಂತೆ ಇತರರು ಉಪಸ್ಥಿತರಿದ್ದರು.