ಶನಿವಾರಸಂತೆ, ಜ. ೧೭: ಕೊಡ್ಲಿಪೇಟೆಯ ಮುಖ್ಯರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ಗೆ ಹಿಂಬದಿಯಿAದ ಡಿಕ್ಕಿ ಪಡಿಸಿದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಕ್ಯಾತೆ ಗ್ರಾಮದ ಶಿವರಾಜ್ (೭೨) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ತಲೆಯ ಮೇಲೆ ಲಾರಿಯ ಚಕ್ರ ಹರಿದ ಪರಿಣಾಮ ಮೃತನ ಮುಖ ಛಿದ್ರವಾಗಿದೆ. ಟಿಪ್ಪರ್ ಚಾಲಕ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದು, ಪತ್ತೆಗಾಗಿ ಕೊಡ್ಲಿಪೇಟೆ ಉಪ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಬೈಕ್ ಚಾಲನೆ ಮಾಡುತ್ತಿದ್ದ ಆಲೂರು ತಾಲೂಕಿನ ಕುದ್ರಳ್ಳಿ ಗ್ರಾಮದ ರುದ್ರೇಶ್ (೫೮) ಗಾಯಗೊಂಡಿದ್ದು, ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅಲ್ಲಿನ ಶವಾಗಾರದಲ್ಲಿ ಶಿವರಾಜರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಿತು. ವೃತ್ತ ನಿರೀಕ್ಷಕ ಮಹೇಶ್, ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಉಪ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ