ಮಡಿಕೇರಿ, ಜ. ೧೭: ಜಿಲ್ಲೆಯಲ್ಲಿ ತಾ. ೧೭ ರಂದು ಹೊಸದಾಗಿ ೨ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೫,೪೧೧ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೨೯ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೭೭೬ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೭೨ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೧೧ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೬೧ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೩೮ ನಿಯಂತ್ರಿತ ವಲಯಗಳಿವೆ. ಜಿಲ್ಲೆಯಲ್ಲಿ ಒಟ್ಟು ೪೨೦೪ ಶಿಕ್ಷಕರಿಗೆ, ೭೧೭೨ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ೪ ಶಿಕ್ಷಕರಿಗೆ, ೮ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.