ಸೋಮವಾರಪೇಟೆ, ಜ. ೧೭: ಕೊಡ್ಲಿಪೇಟೆಯಿಂದ ಸೋಮವಾರಪೇಟೆ ವರೆಗಿನ ರಾಜ್ಯ ಹೆದ್ದಾರಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ತಾಲೂಕು ಘಟಕದ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ತಾಲೂಕಿನ ರಾಜ್ಯ ಹೆದ್ದಾರಿಯ ರಸ್ತೆಗಳು ಸಂಪೂರ್ಣ ಗುಂಡಿಗಳಿAದ ಕೂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಇದೀಗ ಈ ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಗುಣಮಟ್ಟದ ಡಾಂಬರು ಬಳಸುತ್ತಿಲ್ಲ. ಗುಂಡಿಗಳನ್ನು ಮುಚ್ಚಿಹೋದ ಅರ್ಧ ಗಂಟೆಯೊಳಗೆ ಕಿತ್ತು ಬರುತ್ತಿವೆ ಎಂದು ಆರೋಪಿಸಿದ್ದಾರೆ.
ರಸ್ತೆಯ ಗುಂಡಿ ಮುಚ್ಚುವ ಕಾರ್ಯ ಕಳಪೆಯಾಗಿದ್ದು, ಈ ಬಗ್ಗೆ ತನಿಖೆಯಾಗಬೇಕು. ಅಭಿಯಂತರರು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.