ಕುಶಾಲನಗರ, ಜ. ೧೮: ಕುಶಾಲನಗರ ಸೇರಿದಂತೆ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯಾಗಿ ನಿಯೋಜನೆ ಗೊಂಡಿರುವ ಎಸ್.ಎಸ್.ನಕುಲ್ ಭರವಸೆ ವ್ಯಕ್ತಪಡಿಸಿದ್ದಾರೆ. ಕುಶಾಲನಗರದ ಆರ್ಯವೈಶ್ಯ ಮಂಡಳಿ ಆಶ್ರಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನಕುಲ್, ಸರಕಾರದ ಮಟ್ಟದಲ್ಲಿ ಅವಶ್ಯವಿರುವ ಯೋಜನೆಗಳಿಗೆ ಮನವಿ ಬಂದಲ್ಲಿ ಸಚಿವಾಲಯದ ಮೂಲಕ ಅದನ್ನು ಅನುಷ್ಠಾನಗೊಳಿಸಲು ತನ್ನ ಸಹಕಾರ ಇರುತ್ತದೆ ಎಂದು ಹೇಳಿದರು.

ಕುಶಾಲನಗರ ವಾಸವಿ ಮಹಲ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಎಸ್.ಎಸ್. ನಕುಲ್ ಮತ್ತು ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್ ಅವರನ್ನು ಸಚಿವಾಲಯದ ಮೂಲಕ ಅದನ್ನು ಅನುಷ್ಠಾನಗೊಳಿಸಲು ತನ್ನ ಸಹಕಾರ ಇರುತ್ತದೆ ಎಂದು ಹೇಳಿದರು.

ಕುಶಾಲನಗರ ವಾಸವಿ ಮಹಲ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಎಸ್.ಎಸ್. ನಕುಲ್ ಮತ್ತು ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್ ಅವರನ್ನು ಮನವಿ ಪತ್ರ ಸಲ್ಲಿಸಲಾಯಿತು.

ಇದೇ ಸಂದರ್ಭ ಸನ್ಮಾನಿತರಾದ ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅರುಣ್, ತಮ್ಮ ಹುಟ್ಟೂರಿಗೆ ಸರಕಾರದ ಮೂಲಕ ಯೋಜನೆಗಳನ್ನು ರೂಪಿಸಲು ಸಹಾಯ ಮಾಡುವುದಾಗಿ ತಿಳಿಸಿದರು.

ಆರ್ಯವೈಶ್ಯ ಮಂಡಳಿ ಅಧ್ಯಕ್ಷ ವಿ.ಪಿ.ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಂಡಳಿ ಜಿಲ್ಲಾಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್, ಕಾರ್ಯದರ್ಶಿ ಬಿ.ಎಲ್.ಅಶೋಕ್, ಶೋಭಾ ಸತ್ಯ, ಕೆ.ಆರ್.ರವಿಕುಮಾರ್, ಉದಯಕುಮಾರ್, ಎಸ್.ಕೆ.ಸತೀಶ್, ವಿ.ಎನ್.ವಸಂತಕುಮಾರ್, ಸಂಘ ಸಂಸ್ಥೆಗಳ ಪ್ರಮುಖರು ಮತ್ತಿತರರು ಇದ್ದರು.