ಮಡಿಕೇರಿ, ಜ.೧೮ : ಸಂಕಷ್ಟ ದಲ್ಲಿರುವ ಕೊಡಗಿನ ಬೆಳೆಗಾರರು ಹಾಗೂ ರೈತರು ತೀರಾ ಸಂಕಷ್ಟದಲ್ಲಿ ದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇಲ್ಲಿಯವರೆಗೆ ಬೆಳೆಗಾರರು ಹಾಗೂ ರೈತರಿಗೆ ನೀಡಿದ ಪರಿಹಾರದ ಮೊತ್ತದ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ಒತ್ತಾಯಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಬೆಳೆಗಾರರು ಹಾಗೂ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಇಲ್ಲಿಯವರೆಗೆ ನೀಡಿರುವ ಬೆಳೆ ಪರಿಹಾರ, ಬೆಂಬಲ ಬೆಲೆ, ಮಳೆಹಾನಿ ಪರಿಹಾರಗಳ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದರು.

ಮಹಾಮಳೆಯಿAದ ಆದ ನಷ್ಟಕ್ಕೆ ಇಲ್ಲಿಯವರೆಗೆ ಸರ್ಕಾರ ಪರಿಹಾರವನ್ನು ಬಿಡುಗಡೆ ಮಾಡಿಲ್ಲ. ಕೊಡಗಿನ ಬೆಳೆಗಾರರು ಹಾಗೂ ರೈತರು ಪ್ರಾಕೃತಿಕ ವಿಕೋಪ ಮತ್ತು ವನ್ಯಜೀವಿಗಳ ದಾಳಿಯಿಂದ ತತ್ತರಿಸಿ ಹೋಗಿದ್ದು, ಸರ್ಕಾರ ತಕ್ಷಣ ನೆರವಿಗೆ ಬರಬೇಕು. ತೋಟ ಮತ್ತು ಗದ್ದೆಯನ್ನೇ ನಂಬಿ ಬದುಕುತ್ತಿರುವ ಕೊಡಗಿನ ಕೃಷಿಕ ವರ್ಗಕ್ಕೆ ಬೇರೆ ಆದಾಯದ ಮೂಲ ಇಲ್ಲದೆ ಇರುವುದರಿಂದ ಕೇರಳದ ಮಾದರಿಯಲ್ಲಿ ಕಾಫಿ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಮತ್ತು ಭತ್ತಕ್ಕೂ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಒತ್ತಾಯಿಸಿದರು.

ಅಕಾಲಿಕ ಮಳೆಯಿಂದ ಆಗಿರುವ ನಷ್ಟದ ಸಮೀಕ್ಷೆಗೆ ವಿಶೇಷ ತಜ್ಞರ ತಂಡವನ್ನು ಕೊಡಗು ಜಿಲ್ಲೆಗೆ ಕಳುಹಿಸಿಕೊಡಬೇಕು. ಬೆಳೆಹಾನಿ ವೀಕ್ಷಿಸಲು ಆಗಮಿಸುವ ತಂಡ ಬೆಳೆಗಾರರನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕೆ ಹೊರತು ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳನ್ನು ಮಾತ್ರ ಸಂಪರ್ಕಿಸಬಾರದು. ಇಲ್ಲಿಯವರೆಗೆ ಬಂದ ಮೊದಲ ಪುಟದಿಂದ) ತಂಡದಿAದ ಬೆಳೆಗಾರರಿಗೆ ಯಾವುದೇ ಲಾಭವಾಗಿಲ್ಲವೆಂದು ಟೀಕಿಸಿದರು.

ವನ್ಯಜೀವಿಗಳ ದಾಳಿ ಹೆಚ್ಚಾಗಿದ್ದು, ಇತ್ತೀಚಿನ ದಿನಗಳಲ್ಲಿ ಮಂಗಗಳ ಹಾವಳಿ ಮಿತಿ ಮೀರಿದೆ. ತೋಟದಲ್ಲಿರುವ ಯಾವುದೇ ಫಸಲು ಬೆಳೆಗಾರರಿಗೆ ಸಿಗುತ್ತಿಲ್ಲ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕಾಡು ಪ್ರಾಣಿಗಳ ಉಪಟಳವನ್ನು ನಿಯಂತ್ರಿಸಬೇಕು.

ಮತ್ತೆ ನಾಲ್ಕು ತಿಂಗಳಲ್ಲಿ ಮಳೆಗಾಲ ಆರಂಭವಾಗುವುದರಿAದ ಈ ಹಿಂದಿನ ಅನಾಹುತಗಳು ಪುನರಾವರ್ತನೆ ಆಗುವುದನ್ನು ತಡೆಯಲು ವಿಜ್ಞಾನಿಗಳ ತಂಡವನ್ನು ಅಧ್ಯಯನಕ್ಕಾಗಿ ಕಳುಹಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕೊಡಗಿನ ಗಿರಿಜನ ಹಾಡಿಗಳ ನಿವಾಸಿಗಳು ಸಂಕಷ್ಟದ ಬದುಕನ್ನು ಸಾಗಿಸುತ್ತಿದ್ದು, ಸರ್ಕಾರ ಹಾಡಿಗಳಿಗೂ ಪ್ರಾತಿನಿದ್ಯ ನೀಡಿ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು. ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಪಕ್ಷಾತೀತವಾಗಿ ಬೆಳೆಗಾರರ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಹೋರಾಟವನ್ನು ನಡೆಸುತ್ತಲೇ ಬರುತ್ತಿದ್ದಾರೆ. ಆದರೆ ಕಣ್ಣು, ಕಿವಿ ಇಲ್ಲದ ಸರ್ಕಾರ ಯಾವುದಕ್ಕೂ ಬೆಲೆ ನೀಡುತ್ತಿಲ್ಲ. ಸದನದಲ್ಲಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರೆ ಸಂಬAಧಪಟ್ಟ ಸಚಿವರುಗಳು ಸಮರ್ಪಕವಾದ ಉತ್ತರವನ್ನೇ ನೀಡುತ್ತಿಲ್ಲ ಯಾರೇ ಆದರೂ ಸದನದಲ್ಲಿ ಪ್ರಶ್ನೆ ಕೇಳಿದರೆ ಸಚಿವರುಗಳು ಇಲಾಖೆಯಿಂದ ಮಾಹಿತಿ ಪಡೆದು ಸರಿಯಾದ ಉತ್ತರ ನೀಡಬೇಕೆಂದು ಆಗ್ರಹಿಸಿದರು.

ಅಡುಗೆ ಅನಿಲ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರವಿದ್ದಾಗ ಹತ್ತು ಪೈಸೆ ಬೆಲೆ ಹೆಚ್ಚಳವಾದರೂ ಬಿಜೆಪಿ ಮಂದಿ ಬೀದಿಗೆ ಬಂದು ಹೋರಾಟ ನಡೆಸುತ್ತಿದ್ದರು. ಆದರೆ ಇಂದು ಬೆಲೆ ಗಗನಕ್ಕೇರಿದರೂ ಯಾರೂ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ, ರಾಜ್ಯ ಸರ್ಕಾರ ಇಲ್ಲಿನ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಿ ಕೇಳುತ್ತಿಲ್ಲ ಎಂದು ಅವರು ಆರೋಪಿಸಿದರು.

ನಾಳೆ ರಾಜಭವನ ಮುತ್ತಿಗೆ

ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ತಾ.೨೦ ರಂದು ಕಾಂಗ್ರೆಸ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆ ಹೋರಾಟ ನಡೆಯಲಿದೆ ಎಂದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆಯನ್ನು ಪ್ರತಿಭಟನೆಯ ಸಂದರ್ಭ ವಿರೋಧಿಸಲಾಗುವುದೆಂದರು.ಕಳೆದ ೪೪ ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಮಾತ್ರ ಮಾತುಕತೆಯ ನಾಟಕವನ್ನಷ್ಟೇ ಆಡುತ್ತಿದೆ ಎಂದು ಅವರು ಆರೋಪಿಸಿದರು. ಕೃಷಿ ತಿದ್ದುಪಡಿ ಕಾಯ್ದೆಯಿಂದ ಕೃಷಿ ಭೂಮಿ ಬಂಡವಾಳಶಾಹಿಗಳ ಪಾಲಾಗುತ್ತಿದ್ದು, ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೆ ಅದೇ ಭೂಮಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದ ನಿರ್ಧಾರದಿಂದಾಗಿ ಮುಂದಿನ ದಿನಗಳಲ್ಲಿ ರೈತರಿಗೆ ಬೆಂಬಲ ಬೆಲೆ ಮತ್ತು ಸಹಾಯಧನ ಸಿಗದ ಪರಿಸ್ಥಿತಿ ನಿರ್ಮಾಣವಾಗಬಹುದು. ಅಕ್ಕಿಯ ಬೆಲೆ ಕೆ.ಜಿ ಗೆ ನೂರು ರೂ. ದಾಟಬಹುದು. ಅಲ್ಲದೆ ಪಡಿತರ ವ್ಯವಸ್ಥೆಯೂ ಇಲ್ಲದಂತಾಗಬಹುದು ಎಂದು ಮುತ್ತಪ್ಪ ಆತಂಕ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಿ.ಎ. ಜೀವಿಜಯ ಮಾತನಾಡಿ, ತೈಲೋತ್ಪನ್ನಗಳ ಬೆಲೆ ಹೆಚ್ಚಳವನ್ನು ವಿರೋಧಿಸಿದರು. ಬಿಜೆಪಿ ಆಡಳಿತ ವ್ಯವಸ್ಥೆ ಇರುವಲ್ಲಿ ಅಧಿಕಾರ ದುರುಪಯೋಗವಾಗುತ್ತಿದೆ ಎಂದು ಟೀಕಿಸಿದ ಅವರು, ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಮಾತ್ರ ನೆರವು ನೀಡಿದರೆ ಸಾಲದು, ಎಲ್ಲಾ ರಾಜ್ಯಗಳಿಗೂ ಕೇಂದ್ರದ ಸಹಾಯ ಸಿಗಬೇಕೆಂದು ಒತ್ತಾಯಿಸಿದರು.

ಸಂವಿಧಾನವನ್ನು ಬದಲಾಯಿಸುವ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ ಬಿ.ಎ. ಜೀವಿಜಯ ದೇಶವನ್ನು ಕಾಪಾಡಲು ಆ ಭಗವಂತನಿAದಲೂ ಸಾಧ್ಯವಿಲ್ಲ ಎಂದರು. ಊರಿನ ದೇವಾಲಯಗಳನ್ನು ಮೊದಲು ಸರಿಪಡಿಸಿ ನಂತರ ರಾಮಮಂದಿರ ನಿರ್ಮಿಸಲಿ ಎಂದು ಅವರು ಹೇಳಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ತಾ.೨೦ ರಂದು ನಡೆಯುವ ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಕೊಡಗಿನ ಮೂರು ತಾಲ್ಲೂಕುಗಳ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮುತ್ತಿಗೆ ನಂತರ ಗ್ರಾಮ ಮಟ್ಟದಲ್ಲಿ ಹೋರಾಟ ರೂಪಿಸಲಾಗುವದೆಂದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಹಾಗೂ ಪ್ರಮುಖರಾದ ಅಜ್ಜಳ್ಳಿ ರವಿ ಉಪಸ್ಥಿತರಿದ್ದರು.